30
April, 2026

A News 365Times Venture

30
Thursday
April, 2026

A News 365Times Venture

ಗ್ಯಾರಂಟಿ ಅನುಷ್ಟಾನ ಸಮಿತಿಗೆ ವಿರೋಧ: BJP-JDS ಪ್ರತಿಭಟನೆ , ಆಕ್ರೋಶ

Date:

ಬೆಂಗಳೂರು,ಮಾರ್ಚ್,12,2025 (www.justkannada.in):  ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರದ ಹಣದಿಂದ ಸಂಬಳ ನೀಡುವ ಮೂಲಕ ಜನರ ತೆರಿಗೆ ಹಣವನ್ನ  ಕಾಂಗ್ರೆಸ್ ಸರ್ಕಾರ ಪೋಲು ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಗ್ಯಾರಂಟಿ ಅನುಷ್ಟಾನ ಸಮಿತಿಗೆ ವಿರೋಧ ವ್ಯಕ್ತಪಡಿಸಿ ವಿಧಾನಸೌಧದ ಕೆಂಗಲ್ ಪ್ರತಿಮೆ ಎದುರು ಬಿಜೆಪಿ-ಜೆಡಿಎಸ್ ನಾಯಕರು ಪ್ರತಿಭಟನೆ  ನಡೆಸಿ ರಾಜ್ಯ ಸರ್ಕಾರದ ನಡೆ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಸರ್ಕಾರ ಅಧಿಕಾರಕ್ಕೆ ತಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ ಪಡೆಯುವ  ಹಕ್ಕಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್ ಗೆ ಖಡಕ್ ತಿರುಗೇಟು ಕೊಟ್ಟ ವಿಪಕ್ಷ ನಾಯಕ ಆರ್.ಅಶೋಕ್,  ಭಿಕ್ಷೆ ಬೇಡಿ ನಿಮ್ಮ ಕಾರ್ಯಕರ್ತರಿಗೆ ಹಣ ನೀಡಿ ಸರ್ಕಾರದ ಹಣವನ್ನಲ್ಲ ಎಂದು ಕುಟುಕಿದರು.

ವಿವಿ ಬದಲು ಕಾಂಗ್ರೆಸ್ ಅನ್ನೇ ಮುಚ್ಚುಬಿಡಿ- ಛಲವಾದಿ ನಾರಾಯಣಸ್ವಾಮಿ ಕಿಡಿ

ಇದೇ ವೇಳೆ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಇರುವವರೆಗೂ ದೇಶ, ರಾಜ್ಯ ಅಭಿವೃದ್ದಿ ಆಗಲ್ಲ. ಮಾನ ಮರ್ಯಾದೆ ಇದ್ರೆ ವಿವಿ ಬದಲು ಕಾಂಗ್ರೆಸ್ ಮುಚ್ಚಿಬಿಡಿ. ಕಾಂಗ್ರೆಸ್ ಮುಚ್ಚಿದರೇ ಏನು ಆಗಲ್ಲ ಕಾಂಗ್ರೆಸ್ ಮುಚ್ಚುಬಿಟ್ಟರೇ ಎಲ್ಲರೂ ಸಹ ಆರಾಮವಾಗಿ ಇರ್ತಾರೆ ಎಂದು ವಾಗ್ದಾಳಿ ನಡೆಸಿದರು.

Key words: Opposition, Guarantee, Implementation, Committee, BJP-JDS, protest

The post ಗ್ಯಾರಂಟಿ ಅನುಷ್ಟಾನ ಸಮಿತಿಗೆ ವಿರೋಧ: BJP-JDS ಪ್ರತಿಭಟನೆ , ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...