22
April, 2026

A News 365Times Venture

22
Wednesday
April, 2026

A News 365Times Venture

‘ಗ್ಯಾಸ್’ ಅಭಾವ: ಆಟೋ ಚಾಲಕರಿಗೆ ಆತಂಕ ಬೇಡ -ಸರ್ಕಾರದಿಂದ ಪ್ರಕರಣೆ

Date:

ಬೆಂಗಳೂರು,ಏಪ್ರಿಲ್,8,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗ್ಯಾಸ್​ ಸಿಗದೆ ಆಟೋ ಚಾಲಕರಿಗೆ ಸಂಕಷ್ಟ ಎದುರಿಸುತ್ತಿತ್ತು. ಇದೀಗ ಆಟೋ ಚಾಲಕರು ಆತಂಕಪಡುವ ಅವಶ್ಯಕತೆ ಇಲ್ಲ. ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ. IOCL, BPC, HPC ಕಂಪನಿಗಳಿಂದ ಗ್ಯಾಸ್​ ಪೂರೈಕೆ ನಡೆಯುತ್ತಿದೆ. ಏಪ್ರಿಲ್ 2ರಿಂದ ಏಪ್ರಿಲ್‌ 6ರವರೆಗೆ ದಿನನಿತ್ಯ ಸರಬರಾಜು ಆಗುತ್ತಿದೆ. ಪ್ರತಿದಿನ 83ರಿಂದ 94 ಮೆಟ್ರಿಕ್ ಟನ್ ​ವರೆಗೂ ಪೂರೈಕೆ ಮಾಡಲಾಗಿದೆ. ಏಪ್ರಿಲ್ 5ರಂದು ಅತಿ ಹೆಚ್ಚು 94.11 MT ಸರಬರಾಜು ಮಾಡಲಾಗಿದೆ. ಆಟೋ ಚಾಲಕರು ಆತಂಕಪಡಬೇಕಾಗಿಲ್ಲ ಎಂದು ತಿಳಿಸಿದೆ.

ಇನ್ನು ಎಲ್​ಪಿಜಿ ಪೂರೈಕೆ ವ್ಯವಸ್ಥೆಯನ್ನು ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಆಟೋ ಚಾಲಕರಿಗೆ ಆತಂಕ ಬೇಡ, ಪೂರೈಕೆ ಮೇಲೆ ಸರ್ಕಾರದ ನಿಗಾ ಇದೆ. ರಾಜ್ಯದಲ್ಲಿನ ಆಟೋ ಮಾಲೀಕರು ಮತ್ತು ಚಾಲಕರುಗಳು ಆತಂಕ ಪಡದೇ ಮತ್ತು ಯಾವುದೇ ವದಂತಿಗಳಿಗೆ ಕಿವಿ ಕೊಡದೇ ಸಹಕರಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

Key words: LPG Gas, Auto drivers, government, statement

The post ‘ಗ್ಯಾಸ್’ ಅಭಾವ: ಆಟೋ ಚಾಲಕರಿಗೆ ಆತಂಕ ಬೇಡ -ಸರ್ಕಾರದಿಂದ ಪ್ರಕರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು ಮಾತನಾಡುತ್ತಾರೆ....

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು...

ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ  ಪಡೆದುಕೊಳ್ಳಿ-ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು, ಏಪ್ರಿಲ್.22,2026 (www.justkannada.in): ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು...