ಬೆಂಗಳೂರು, ಮೇ ,14,2025 (www.justkannada.in): ನಾಳೆಯಿಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯುಗಾಂತ್ಯ ಆಗುತ್ತಿದ್ದು, ಗ್ರೇಟರ್ ಬೆಂಗಳೂರು ಜಾರಿಗೆ ಬರಲಿದೆ.
ಈ ಸಂಬಂಧ ರಾಜ್ಯ ಸರ್ಕಾರ ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬರುತ್ತಿದೆ.
ಮೇ 15ರಿಂದ ಗ್ರೇಟರ್ ಬೆಂಗಳೂರು ಜಾರಿಗೆ ಬರುವಂತೆ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ಗೆ ಉಪಾಧ್ಯಕ್ಷರಾಗಲಿದ್ದಾರೆ.
ಈಗಾಗಲೇ ಗ್ರೇಟರ್ ಬೆಂಗಳೂರಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬೆನ್ನಲ್ಲೇ ಅಲರ್ಟ್ ಆದ ಸರ್ಕಾರ ನಾಳೆ (ಮೇ 15)ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ತಯಾರಿ ನಡೆಸಿತ್ತು. ಹಾಗಾಗಿ ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬರುತ್ತಿದೆ.
ಮೇ15 ರ ನಂತರ ಬಿಬಿಎಂಪಿ ಬದಲು ಅಂದಿನಿಂದಲೇ ಜಿಬಿಎ ಅಸ್ಥಿತ್ವಕ್ಕೆ ಬರಲಿದ್ದು, ಬೆಂಗಳೂರು ಆಡಳಿತ ಕಾಯ್ದೆ-2024 ಜಾರಿಯಾಗಲಿದೆ. ಈಗಿರುವ ಬಿಬಿಎಂಪಿಯನ್ನ ಮೂರು ಪಾಲಿಕೆಗಳನ್ನಾಗಿ ಮಾಡುವ ಸಾಧ್ಯತೆಗಳಿವೆ. ಈ ಮೂರು ಪಾಲಿಕೆಗಳ ವ್ಯಾಪ್ತಿ ಗ್ರೇಟರ್ ಬೆಂಗಳೂರಿಗೆ ಬರುವುದರಿಂದ ಜಿಬಿಎಗೆ ಆಡಳಿತಾಧಿಕಾರಿಗಳನ್ನ ನೇಮಕ ಮಾಡಲಾಗುತ್ತೆ. ಆಡಳಿತಾಧಿಕಾರಿ ಅಡಿಯಲ್ಲೇ ಮೂರು ಪಾಲಿಕೆಗಳ ಅಡಳಿತ ನಿರ್ವಹಣೆಯಾಗಲಿದೆ ಎಂದು ಹೇಳಲಾಗುತ್ತಿದೆ.
Key words: BBMP, Greater Bengaluru, implemented, tomorrow
The post ‘ಗ್ರೇಟರ್ ಬೆಂಗಳೂರು’ ನಾಳೆಯಿಂದ ಜಾರಿ: ಅಧಿಕೃತ ಅಧಿಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.