8
July, 2025

A News 365Times Venture

8
Tuesday
July, 2025

A News 365Times Venture

ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ

Date:

ಬೆಂಗಳೂರು,ಏಪ್ರಿಲ್,19,2025 (www.justkannada.in):  ಬೀದರ್ ಮತ್ತು ಶಿವಮೊಗ್ಗದಲ್ಲಿ  ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆಯನ್ನ ಖಂಡಿಸಿದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಎಂದು ಕಿಡಿಕಾರಿದರು.

ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ,  ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ತಪ್ಪು.   ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದರು.

ಹಾಗೆಯೇ ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ಜರುಗಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ  ಆಗ್ರಹಿಸಿದರು.

Key words: CET Exam, Janivara, JDS Leader, Nikhil Kumaraswamy

 

The post ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ

ಮೈಸೂರು,ಜುಲೈ,8,2025 (www.justkannada.in):  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ...

ಜನೌಷಧ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು, ಜುಲೈ, 8,2025 (www.justkannada.in):  ರಾಜ್ಯದಲ್ಲಿ  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ, ಚರ್ಚಿಸಲು ಇದು ಸಮಯವಲ್ಲ – ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,8,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ...

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...