ಬೆಂಗಳೂರು, ಏಪ್ರಿಲ್ 26,2025 (www.justkannada.in): ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಮರು ಪರೀಕ್ಷೆಗೆ ಮನವಿ ಮಾಡಿದೆ.
ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಎಲ್ಲೆಡೆ ಪ್ರತಿಭಟನೆ ಮಾಡುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್ಗೆ ಪಿಐಎಲ್ ಅರ್ಜಿ ಸಲ್ಲಿಸಿದೆ. ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದು, ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬಳಿಕ ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.
ವೃತ್ತಿಪರ ಕೋರ್ಸ್‌ಗಳಿಗಾಗಿ ಏಪ್ರಿಲ್ 16 ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ವೇಳೆ ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಬೀದರ್ ನಲ್ಲಿ ಜನಿವಾರ ತೆಗೆಯೋದಿಲ್ಲ ಎಂದಿದ್ದಕ್ಕೆ ವಿದ್ಯಾರ್ಥಿಯನ್ನ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿರಲಿಲ್ಲ. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
Key words: Janivara Case, PIL, High Court
The post ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.