23
January, 2026

A News 365Times Venture

23
Friday
January, 2026

A News 365Times Venture

ಜಮ್ಮು ಕಾಶ್ಮೀರದಿಂದ ಬೆಂಗಳೂರಿಗೆ 178 ಕನ್ನಡಿಗರು ಸುರಕ್ಷಿತವಾಗಿ ವಾಪಸ್

Date:

ಬೆಂಗಳೂರು, ಏಪ್ರಿಲ್,24,2025 (www.justkannada.in): ಜಮ್ಮು ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿ ಬಳಿಕ ಇದೀಗ ಶ್ರೀನಗರದಿಂದ 178 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಕ್ಕೆ ಬಂದಿಳಿದಿದ್ದಾರೆ.

ಇಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ 178 ಕನ್ನಡಿಗರು  ಶ್ರೀನಗರದಿಂದ ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. ಜಮ್ಮು ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ  ವಾಪಸ್ ಕರೆ ತರಲು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್  ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರನ್ನ ಸಂಪರ್ಕಿಸಿದ್ದರು. ಇದೀಗ  178 ಕನ್ನಡಿಗರು  ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ

ಇಂದು ಬೆಳಗ್ಗೆ 8:45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು,ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇದೀಗ ಬಂದಿಳಿದಿದೆ.

Key words: 178 Kannadigas, return, Bangalore, from, Jammu and Kashmir

The post ಜಮ್ಮು ಕಾಶ್ಮೀರದಿಂದ ಬೆಂಗಳೂರಿಗೆ 178 ಕನ್ನಡಿಗರು ಸುರಕ್ಷಿತವಾಗಿ ವಾಪಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...