25
August, 2026

A News 365Times Venture

25
Tuesday
August, 2026

A News 365Times Venture

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in):  ಫೆಬ್ರವರಿ 11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌. ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.

ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು. ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.

ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Global Investors Summit, Minister, M.B. Patil, preparations

The post ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ...

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ...

225 ಗ್ರೇಡ್-1 ಪಂಚಾಯತ್ ಕಾರ್ಯದರ್ಶಿಗಳಿಗೆ PDO ಹುದ್ದೆಗೆ ಬಡ್ತಿ: ಕೌನ್ಸಿಲಿಂಗ್

ಬೆಂಗಳೂರು,ಆಗಸ್ಟ್,25,2026 (www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ ಬಡ್ತಿ...