12
March, 2026

A News 365Times Venture

12
Thursday
March, 2026

A News 365Times Venture

ಜಿಎಸ್ ಟಿ ಸಂಗ್ರಹಣೆ:  ದೇಶದಲ್ಲಿ ರಾಜ್ಯ ಮೊದಲ ಸ್ಥಾನ ಗಳಿಸಲು ಪ್ರಯತ್ನಿಸಿ-ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು ,ಮೇ,17,2025 (www.justkannada.in):  ಜಿಎಸ್ ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದೆ.  ಹೀಗಾಗಿ 2ನೇ ಸ್ಥಾನದಿಂದ ಮೊದಲ ಸ್ಥಾನಕ್ಕೆ ರಾಜ್ಯವನ್ನ ತರಲು ಪ್ರಯತ್ನಿಸಬೇಕು ಎಂದು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚಿಸಿದರು.

ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ತೆರಿಗೆ ಸಂಗ್ರಹಣೆ ಸರಿಯಾಗಿ ಆದರಷ್ಟೆ ರಾಜ್ಯವನ್ನು ಅಭಿವೃದ್ದಿ ಹಾದಿಯಲ್ಲಿ ಕರೆದೊಯ್ಯಲು ಸಾಧ್ಯ. ಹೀಗಾಗಿ ವಾಣಿಜ್ಯ ತೆರಿಗೆ ಸಂಗ್ರಹ ಸಂಬಂಧ ನೀಡಲಾಗಿರುವ ಗುರಿಯನ್ನ ಮುಟ್ಟಲೇಬೇಕು. ಅದಕ್ಕಾಗಿ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ಸವಲತ್ತು ಸಹಕಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು.

ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ.  ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷದವರು ಟೀಕಿಸಿದ್ದರು. ಸರ್ಕಾರದ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ ಎಂದರು.

Key words: GST, collection, state number one , country, CM Siddaramaiah

The post ಜಿಎಸ್ ಟಿ ಸಂಗ್ರಹಣೆ:  ದೇಶದಲ್ಲಿ ರಾಜ್ಯ ಮೊದಲ ಸ್ಥಾನ ಗಳಿಸಲು ಪ್ರಯತ್ನಿಸಿ-ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...