ಬೆಂಗಳೂರು ,ಮೇ,17,2025 (www.justkannada.in): ಜಿಎಸ್ ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಹೀಗಾಗಿ 2ನೇ ಸ್ಥಾನದಿಂದ ಮೊದಲ ಸ್ಥಾನಕ್ಕೆ ರಾಜ್ಯವನ್ನ ತರಲು ಪ್ರಯತ್ನಿಸಬೇಕು ಎಂದು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತೆರಿಗೆ ಸಂಗ್ರಹಣೆ ಸರಿಯಾಗಿ ಆದರಷ್ಟೆ ರಾಜ್ಯವನ್ನು ಅಭಿವೃದ್ದಿ ಹಾದಿಯಲ್ಲಿ ಕರೆದೊಯ್ಯಲು ಸಾಧ್ಯ. ಹೀಗಾಗಿ ವಾಣಿಜ್ಯ ತೆರಿಗೆ ಸಂಗ್ರಹ ಸಂಬಂಧ ನೀಡಲಾಗಿರುವ ಗುರಿಯನ್ನ ಮುಟ್ಟಲೇಬೇಕು. ಅದಕ್ಕಾಗಿ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ಸವಲತ್ತು ಸಹಕಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು.
ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷದವರು ಟೀಕಿಸಿದ್ದರು. ಸರ್ಕಾರದ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ ಎಂದರು.
Key words: GST, collection, state number one , country, CM Siddaramaiah
The post ಜಿಎಸ್ ಟಿ ಸಂಗ್ರಹಣೆ: ದೇಶದಲ್ಲಿ ರಾಜ್ಯ ಮೊದಲ ಸ್ಥಾನ ಗಳಿಸಲು ಪ್ರಯತ್ನಿಸಿ-ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.