10
May, 2026

A News 365Times Venture

10
Sunday
May, 2026

A News 365Times Venture

ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ, ಏಪ್ರಿಲ್, 28,2026 (www.justkannada.in):  ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ದಲ್ಲಿ ಅತ್ಯುನ್ನತ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳು ಲಭ್ಯವಿದೆ.

ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ  ಪಾಸಾಗಿರಬೇಕು. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಎರಡನೇಯ ವರ್ಷಕ್ಕೆ ನೇರ ಪ್ರವೇಶವಿರುತ್ತದೆ. ಈ ಡಿಪ್ಲೋಮಾ ಕೋರ್ಸ್ ಗಳ ಅವಧಿ 3+1 ವರ್ಷ. ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು ಅರ್ಜಿಯನ್ನು https://gttc.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 9036144417, 9686268737, 9980956422 ಅಥವಾ ಜಿಟಿಟಿಸಿ, ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಬಹುದು ಎಂದು ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Applications, invited, Diploma, admission , GTTC center

The post ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...