ಮೈಸೂರು ,ಜೂನ್,11,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜೂನ್ 27ರಿಂದ ಆಷಾಢ ಶುಕ್ರವಾರದ ಪೂಜೆ ಆರಂಭವಾಗಲಿದ್ದು, ವಾರದಲ್ಲಿ ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಪೂರ್ಣ ನಿಷೇಧ ಹೇರಲಾಗಿದ್ದು, ಸರ್ಕಾರಿ ಬಸ್ ಗಳಲ್ಲಿ ಉಚಿತ ಸೇವೆ ಒದಗಿಸಲಾಗುತ್ತಿದೆ. ಈ ಬಾರಿ 300 ರೂಪಾಯಿ ಸರದಿ ಸಾಲಿನ ಟಿಕೆಟ್ ಜೊತೆಗೆ ವಿಶೇಷ ಕ್ಯೂ ಸಿಸ್ಟಮ್ ಜಾರಿ ಮಾಡಲಾಗುತ್ತಿದೆ.
2 ಸಾವಿರ ರೂಪಾಯಿಯ ಎಸಿ ಬಸ್ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಎಸಿ ಬಸ್ ಮೂಲಕ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ ಮಡಲಾಗಿದೆ. ಈ ಕುರಿತು ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆಯ ಬಳಿಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮಾಹಿತಿ ನೀಡಿದರು.
ಸುದ್ದಿ ಗೋಷ್ಠಿಯಲ್ಲಿ ಶಾಸಕ ಜಿಟಿ ದೇವೇಗವಡ, ಡಿಸಿ ಲಕ್ಷ್ಮಿಕಾಂತ ರೆಡ್ಡಿ, ಪೋಲಿಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
Key words: June 27, Ashada Friday, private vehicles, Chamundi Hills, prohibited
The post ಜೂ. 27ರಿಂದ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಈ ದಿನಗಳಲ್ಲಿ ಖಾಸಗಿ ವಾಹನಗಳ ಪ್ರವೇಶ ನಿಷೇಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.