18
July, 2025

A News 365Times Venture

18
Friday
July, 2025

A News 365Times Venture

ಟಿಪ್ಪು ಸುಲ್ತಾನರ 233ನೇ ಗಂಧದ ಉರುಸ್‌ ಗೆ ಶಾಸಕ ತನ್ವೀರ್ ಸೇಠ್ ಚಾಲನೆ

Date:

ಮೈಸೂರು,ಮೇ,27,2025 (www.justkannada.in): ಮೈಸೂರು ಸಾಮ್ರಾಜ್ಯವನ್ನು ಆಳಿದ ದೊರೆ ಹಜರತ್ ಟಿಪೂ ಸುಲ್ತಾನರ 233ನೇ ಗಂಧರ ಉರುಸ್ ಕಾರ್ಯಕ್ರಮಕ್ಕೆ ಶಾಸಕ ತನ್ವೀರ್ ಸೇಠ್ ಮೈಸೂರಿನ ಮಿಲಾದ್ ಪಾರ್ಕಿನಲ್ಲಿ ಚಾಲನೆ ನೀಡಿದರು.

ಮಂಗಳವಾರ ಮಧ್ಯಾಹ್ನ ಸುಮಾರು 12.30 ಕ್ಕೆ ಟಿಪ್ಪು ಸುಲ್ತಾನ್ ವೆಲ್‌ ಫೇರ್ ಮತ್ತು ಉರುಸ್ ಸಮಿತಿಯ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಸೂಫಿ ಸಂತರು, ಟಿಪ್ಪು ಸುಲ್ತಾನರ ಅಭಿಮಾನಿಗಳು, ಸಂಘ ಸಂಸ್ಥೆಗಳ ಮುಖಂಡರು, ವಿವಿಧ ಮಸೀದಿಗಳ ಧರ್ಮಗುರುಗಳು ಮತ್ತು ಸರ್‌ ಖಾಜಿ ಸೈಯದ್ ಉಸ್ಮಾನ್ ಅವರ ಸಮ್ಮುಖದಲ್ಲಿ ವಾಡಿಕೆಯಂತೆ ಶ್ರೀಗಂಧದ ಕರಂಡಿಕೆಯನ್ನು ಶಾಸಕ ತನ್ವೀರ್ ಸೇಠ್ ತಲೆಯ ಮೇಲೆ ಹೊತ್ತು ಸೂಫಿಗಳ ವಾದ್ಯದ ಮೆರವಣಿಗೆಯೊಂದಿಗೆ ಮಿಲಾದ್ ಪಾರ್ಕಿನಿಂದ ಪಾದಯಾತ್ರೆ ಹೊರಟು ಬಳಿಕ ಅಲಂಕೃತ ಸಾರೂಟಿನಲ್ಲಿ ನಗರದ ಫೌಂಟನ್ ವೃತ್ತದವರೆಗೂ ಶ್ರೀಗಂಧದ ಕರಂಡಿಕೆಯನ್ನು ತಲೆಯ ಮೇಲೆ ಹೊತ್ತು ಸಾಗಿದರು. ಬಳಿಕ ಅದನ್ನು ವಾಹನದ ಮೂಲಕ ಶ್ರೀರಂಗಪಟ್ಟಣದ ಗುಂಬಜ್‌ ನಲ್ಲಿರುವ ಹಜರತ್ ಟಿಪ್ಪು ಸುಲ್ತಾನದ ಸಮಾಧಿಗೆ ಕೊಂಡೊಯ್ಯಲಾಯಿತು.

ಇದಕ್ಕೂ ಮುನ್ನ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ವೆಲ್‌ಫೇರ್ ಮತ್ತು ಉರುಸ್ ಸಮಿತಿಯ ಅಧ್ಯಕ್ಷರೂ ಮತ್ತು ಹೈಕೋರ್ಟ್ ವಕೀಲರೂ ಆದ ಎಂ.ಎಸ್.ಮುಕ್ರಂ ಮಾತನಾಡಿ, ಟಿಪ್ಪು ಸುಲ್ತಾನ್ ಎಂಬ ಹೆಸರೇ ಒಂದು ದೊಡ್ಡ ಶಕ್ತಿಯಾಗಿದೆ. ಆ ಹೆಸರನ್ನು ಹೇಳಿದರೆ ಎಂತಹ ಬಲಹೀನರೂ ಶೂರರಾಗುತ್ತಾರೆ, ಅಳುವವನ ಮುಖದಲ್ಲಿ ನಗೆ ಸೂಸುತ್ತದೆ, ದೇಶ ದ್ರೋಹಿಗಳ ಎದೆಯಲ್ಲಿ ನಡುಕ ಉಂಟಾಗುತ್ತದೆ ಅಂತಹ ಶಕ್ತಿ ಟೀಪೂ ಸುಲ್ತಾನರ ಹೆಸರಿಗಿದೆ ಎಂದ ಮೇಲೆ ಅವರ ಶಕ್ತಿ ಎಂತಹದು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಅವರು ಕೇವಲ ಶೂರರು ಮಾತ್ರವಲ್ಲ ಅಪ್ಪಟ ದೇಶ ಪ್ರೇಮಿಗಳಾಗಿದ್ದವರು, ಸಾಮಾಜಿಕ ನ್ಯಾಯದ ಹರಿಕಾರರು, ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ರಕ್ಷಿಸುವ ಮಹಾ ಪರಾಕ್ರಮಿಯೂ ಆಗಿದ್ದರು. ಇಂದು ಕೇವಲ ಅವರು ಮುಸ್ಲಿಂ ಧರ್ಮಿಯರು ಎಂಬ ಕಾರಣಕ್ಕೆ ಅವರನ್ನು ಕಡೆಗಳಿಸಲಾಗಿದೆ ಎಂದರು.vtu

ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸು ಮಾತನಾಡಿ, ಕೇವಲ ಓಟಿನ ರಾಜಕಾರಣಕ್ಕಾಗಿ ಟಿಪ್ಪು ಸುಲ್ತಾನ ಎಂಬ ಮಹಾನ್ ದೇಶ ಪ್ರೇಮಿಯನ್ನು ಕಡೆಗಣಿಸಲಾಗಿದೆ. ಶೃಂಗೇರಿ ಮಠವನ್ನು ಲೂಟಿ ಮಾಡಿ, ಶಾರದಾಂಬೆಯ ಮೂಲ ವಿಗ್ರಹವನ್ನು ನದಿಗೆ ಎಸೆದವರು ಬ್ರಾಹ್ಮಣ ಪೇಶ್ವೆಗಳು, ಆದರೇ ಮಠದ ಪುನರ್‌ನಿರ್ಮಾಣಕ್ಕೆ ಟಿಪ್ಪು ಸುಲ್ತಾನರು ಹಣ ಕೊಟ್ಟು ಮಠವನ್ನು ಶತ್ರುಗಳಿಂದ ರಕ್ಷಿಸುತ್ತಾರೆ. ಇಂತಹ ಸತ್ಯ ನಮಗೆ ತಿಳಿದಿದ್ದರೂ ನಾವು ಸುಳ್ಳನ್ನೆ ನಂಬುವಂತೆ ಟೀಪೂ ವಿರುದ್ಧ ಮಾತನಾಡುತ್ತೇವೆ ಎಂದರು.

ವೇದಿಕೆಯಲ್ಲಿ ಎಂ.ಎಫ್.ಕಲೀಂ, ಮಜೀದ್ ಅಹಮದ್, ಮೊಹಮ್ಮದ್ ರಫಿ, ರಘುರಾಜೇ ಅರಸ್, ಶೌಕತ್ ಅಲಿಖಾನ್, ಮೊಹಮ್ಮದ್ ಅಸ್ಲಂ, ಅಜೀಜ್ ಅಲಿ ಕಿಷ್ತಿ ಮುಂತಾದವರು ಇದ್ದರು.

Key words: MLA Tanveer Sait, Tipu Sultan’s, 233rd  Urus, Mysore

The post ಟಿಪ್ಪು ಸುಲ್ತಾನರ 233ನೇ ಗಂಧದ ಉರುಸ್‌ ಗೆ ಶಾಸಕ ತನ್ವೀರ್ ಸೇಠ್ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.

ಮೈಸೂರು,ಜುಲೈ,18,2025 (www.justkannada.in): ಮೈಸೂರು ನಗರ ಜನತೆಯ ಹಲವಾರು ದಿನಗಳ ಬೇಡಿಕೆ ಕಡೆಗೂ...

ಸಿಎಂ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ “ಮೆಟಾ”..!

ಬೆಂಗಳೂರು,ಜುಲೈ,18,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟಾದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ...

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...