ನವದೆಹಲಿ,ಮೇ,14,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಜುಲೈಗೆ ಮುಂದೂಡಿಕೆ ಮಾಡಿದೆ.
ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಮತ್ತು ಸಿಬಿಐ ಸಲ್ಲಿಸಿದ ರಿಟ್ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಬಳಿಕ ವಿಚಾರಣೆಯನ್ನು ಜುಲೈಗೆ ಮುಂದೂಡಿ ಆದೇಶಿಸಿದೆ.
ಸಿಬಿಐ ಪರ ವಾದ ಮಂಡಿಸಿದ ಎ ಎಸ್ ಜಿ ಎಸ್. ವಿ ರಾಜು ಅವರು, ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟದ ಭಾಗವಾಗಿದ್ದಾರೆ. ಭ್ರಷ್ಟಾಚಾರ ಪ್ರಕರಣ ಹೊರ ಬಿದ್ದಿದೆ. ಅಧಿಕಾರದ ದುರುಪಯೋಗ ಇಲ್ಲಿ ಒಂದು ಸಮಸ್ಯೆಯಾಗಿದೆ ಎಂದರು.
ಬಳಿಕ ಡಿಕೆ ಶಿವಕುಮಾರ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿಷಯ ನ್ಯಾಯ ವ್ಯಾಪ್ತಿಗೆ ಒಳಪಟ್ಟಿದೆ. ರಿಟ್ ಅರ್ಜಿ ಉಳಿಸಿಕೊಳ್ಳಲಾಗುವುದಿಲ್ಲ ಎಂದು ಪರಿಗಣಿಸಲಾಗಿದೆ. ವಿಚಾರಣೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು.
ಅರ್ಜಿಯನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದು, ಕರ್ನಾಟಕ ಸರ್ಕಾರದ ನಿರ್ಧಾರವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧದ ಎಫ್‌ಐಆರ್ ಅನ್ನು ಕರ್ನಾಟಕ ಸರ್ಕಾರ ಹಿಂತೆಗೆದುಕೊಂಡಿತ್ತು. ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆಯಲಾಗಿದೆ ಎಂದು ಅಭಿಷೇಕ್ ಮನು ಸಿಂಘವಿ ವಾದ ಮಂಡಿಸಿದರು. ಬಳಿಕ ನ್ಯಾಯಾಧೀಶರು ಈ ಪ್ರಕರಣವನ್ನು ಜುಲೈಗೆ ಮುಂದೂಡಿಕೆ ಮಾಡಿದರು.
Key words: DCM DK Shivakumar Case, Supreme Court, adjourns, hearing
The post ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಅಕ್ರಮ ಆಸ್ತಿ ಗಳಿಕೆ ಕೇಸ್: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.