ಚಿತ್ರದುರ್ಗ,ಜೂನ್,30,2025 (www.justkannada.in): ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ದಲಿತ ಸಿಎಂ ಗೆ ಪರಮೇಶ್ವರ್ ಮಲ್ಲಿಕಾರ್ಜುನ ಖರ್ಗೆ, ಎಚ್ ಸಿ ಮಹದೇವಪ್ಪ ಹಾಗೂ ಮುನಿಯಪ್ಪ ಪೈಪೋಟಿ ನಡೆಸಿದ್ದಾರೆ . ಇತ್ತ ಸಿದ್ದರಾಮಯ್ಯನವರೇ ಮುಂದುವರೆಸಲಿ ಎಂದು ಸಚಿವ ರಾಜಣ್ಣ , ಯತೀಂದ್ರ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದರೇ ಅತ್ತ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಲವು ಶಾಸಕರು ಒತ್ತಾಯಿಸುತ್ತಿದ್ದಾರೆ. ಹೀಗೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಣಹದ್ದಿನಂತೆ ಕಚ್ಚಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಪತನಗೊಂಡು 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.
2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಅಂತ ನಾನು ಹೇಳುವುದಿಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಟೀಕಿಸಿದರು.
Key words: Congress, government , fall , December, BJP MP, Govind Karajol
The post ಡಿಸೆಂಬರ್ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಭವಿಷ್ಯ ನುಡಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.