20
September, 2026

A News 365Times Venture

20
Sunday
September, 2026

A News 365Times Venture

ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವದ ವೈಭವ: ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

Date:

ಮೈಸೂರು, ಜುಲೈ,17,2025 (www.justkannada.in): ಚಾಮುಂಡಿಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ವರ್ಧಂತಿ ಉತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಮೈಸೂರು ರಾಜವಂಶಸ್ಥರ ಕುಲದೇವತೆಯೂ ಅದ ಚಾಮುಂಡೇಶ್ವರಿಯ ವರ್ಧಂತಿ ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ದೇವಸ್ಥಾನದಲ್ಲಿ ಮುಂಜಾನೆ 4 ಗಂಟೆಯಿಂದ ಪೂಜಾ ಕೈಂಕರ್ಯಗಳು ಆರಂಭಗೊಂಡವು.

ದೇವಿಯ ಮೂರ್ತಿಗೆ ಬೆಟ್ಟದಲ್ಲಿರುವ ದೇವಿ ಕೆರೆಯಿಂದ ತಂದ ಶುದ್ದ ಜಲದಿಂದ ಅಭಿಷೇಕ ಮಾಡಿ ನಂತರ  ತಾಯಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಬಳಿಕ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಕುಂಕುಮಾರ್ಚನೆ, ಸಹಸ್ರನಾಮಾರ್ಚನೆ  ನೆರವೇರಿಸಲಾಯಿತು.

ನಂತರ ಮಹಾ ಮಂಗಳಾರತಿ ಬಳಿಕ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಇರಿಸಿ, ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು ಮತ್ತೆ ದೇವಸ್ಥಾನದ ಮುಂಭಾಗದಲ್ಲಿ ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಯಿತು.

ಅರಮನೆ ಪೊಲೀಸ್‌ ಬ್ಯಾಂಡ್‌ ಜೊತೆಗೆ ಮಂಗಳವಾದ್ಯ, ಛತ್ರಿ, ಚಾಮರಗಳೊಂದಿಗೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.  ವರ್ಧಂತಿ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಲಕ್ಷಾಂತರ ಭಕ್ತರು, ಗಣ್ಯರಿಗೆ ಜಿಲ್ಲಾಡಳಿತ  ಅಗತ್ಯ  ಸೌಲಭ್ಯ ಕೈಗೊಂಡಿತ್ತು. ವರ್ಧಂತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೆಚ್ವು ಭಕ್ತರು ಆಗಮಿಸಿದ್ದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಚಾಮುಂಡೇಶ್ವರಿ ದೇವಿಯ ವರ್ಧಂತಿ ಹಿನ್ನೆಲೆಯಲ್ಲಿ  ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿರಲಿಲ್ಲ. ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್ ನಿಂದ ಭಕ್ತಾದಿಗಳಿಗಾಗಿ ಉಚಿತ ಬಸ್ ಸೇವೆಯನ್ನು ಕಲ್ಪಿಸಲಾಗಿತ್ತು.

ಚಾಮುಂಡೇಶ್ವರಿ ದೇವಿಯ ವರ್ಧಂತಿ ಪ್ರಯುಕ್ತ ನಗರದ ಹಲವು ಭಾಗಗಳಲ್ಲಿ ಸಾರ್ವಜನಿಕವಾಗಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಹಮ್ಮಿಕೊಂಡು ಪ್ರಸಾದ ವಿನಿಯೋಗ ಮಾಡಲಾಯಿತು.vtu

Key words: Ashada, Chamundi hills, Chamundeshwari Vardhanti, festival

The post ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವದ ವೈಭವ: ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...