ಬೆಂಗಳೂರು,ಮಾರ್ಚ್,8,2025 (www.justkannada.in): ರಾಜ್ಯ ಸರ್ಕಾರ ದಲಿತರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದು ಇದರ ವಿರುದ್ಧ ಜನಾಂದೋಲನ ನಡೆಸಲು ತೀರ್ಮಾನಿಸಳಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.
ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ದಲಿತ ಸಂಘಟನೆಗಳ ಸಭೆ ನಡೆಯಿತು ಸಭೆ ಬಳಿಕ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ ಎಂಬುದನ್ನು ಸ್ಪಷ್ಟವಾಗಿ ತೋರಿಸಿದ್ದಾರೆ . ಸಿದ್ದರಾಮಯ್ಯ ದಲಿತರನ್ನು ಎತ್ತಿ ಕಟ್ಟಿ ದಲಿತರನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು
ರಾಜ್ಯ ಸರ್ಕಾರ ದಲಿತರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿರುವ ವಿರುದ್ದ ಹೋರಾಟ ಮಾಡಲಾಗುತ್ತದೆ. ದಲಿತ ಸಂಘಟನೆಗಳು ಇದಕ್ಕಾಗಿ 10 ತಂಡಗಳನ್ನು ರಚಿಸಲಿವೆ. ಇನ್ನೊಂದು ವಾರದ ಒಳಗೆ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಪ್ರಕಟಿಸಿದರು.
ರಾಜ್ಯದೆಲ್ಲೆಡೆ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಸಮುದಾಯದ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಈ ಸರಕಾರಕ್ಕೆ ತಕ್ಕ ಪಾಠ ಕಲಿಸಲು ತೀರ್ಮಾನ ಮಾಡಲಾಗಿದೆ. ದಲಿತರಿಗೆ ಆಗಿರುವ ಅನ್ಯಾಯವನ್ನು ಬಿಜೆಪಿ, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಸರಿಪಡಿಸಲು ಮತ್ತು ನ್ಯಾಯ ದೊರಕಿಸಿಕೊಡಲು ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
Key words: Dalits, money, other purpose, Chalavadi Narayanaswamy
The post ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಜನಾಂದೋಲನಕ್ಕೆ ನಿರ್ಧಾರ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.