25
September, 2026

A News 365Times Venture

25
Friday
September, 2026

A News 365Times Venture

ದಸರಾ ದೀಪಾಲಂಕಾರ ಹೆಚ್ಚು ಆಕರ್ಷಕ, ಹೊಸತನದಿಂದ ಕೂಡಿರಲಿ -ಸಚಿವ ಕೆ.ಜೆ.ಜಾರ್ಜ್

Date:

ಮೈಸೂರು, ಸೆಪ್ಟಂಬರ್‌,25, 2026 (wwww.justkannada.in) ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮಾಡಲಾಗುವ ದೀಪಾಲಂಕಾರ ಕಳೆದ ಬಾರಿಗಿಂತಲೂ ಹೆಚ್ಚು ಆಕರ್ಷಕ ಹಾಗೂ ಹೊಸತನದಿಂದ ಕೂಡಿರಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೈಸೂರಿನ ಕಡಕೊಳದಲ್ಲಿರುವ ಕರ್ನಾಟಕ ಇಂಜಿನಿಯರ್ಸ್‌ ಅಸೋಸಿಯೇಷನ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ 2026ನೇ ಸಾಲಿನ ದಸರಾ ಆಚರಣೆಯ ವಿವಿಧ ಕಾರ್ಯಕ್ರಮಗಳ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಸಚಿವ ಕೆ.ಜೆ ಜಾರ್ಜ್ ಅವರು ಮಾತನಾಡಿದರು.

“ಕಳೆದ ಬಾರಿ ದಸರಾ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಈ ಬಾರಿ ಅದಕ್ಕಿಂತಲೂ ವಿಭಿನ್ನವಾಗಿ ಹಾಗೂ ಆಕರ್ಷಕವಾಗಿ ದೀಪಾಲಂಕಾರ ರೂಪಿಸಬೇಕು. ದಸರಾಕ್ಕೆ ಲಕ್ಷಾಂತರ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೆಚ್ಚುವ ರೀತಿಯಲ್ಲಿ ದೀಪಾಲಂಕಾರ ಇರಬೇಕು,” ಎಂದು ಹೇಳಿದರು.

“ದಸರಾ ಅವಧಿಯಲ್ಲಿ ದೀಪಾಲಂಕಾರದಿಂದಾಗಿ ವಿದ್ಯುತ್ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆವಹಿಸಿ ಸಮರ್ಪಕ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಈವರೆಗೆ ದೀಪಾಲಂಕಾರಕ್ಕೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಈ ಬಾರಿಯೂ ಯಾವುದೇ ತೊಂದರೆಯಾಗದಂತೆ ನಿರಂತರ ನಿಗಾ ವಹಿಸಬೇಕು,” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೂ ಮುನ್ನ ಸಭೆಯ ಆರಂಭದಲ್ಲಿ ಸೆಸ್ಕ್ ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಅವರು ದಸರಾ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ದೀಪಾಲಂಕಾರ, ವಿವಿಧ ರಸ್ತೆಗಳು ಹಾಗೂ ವೃತ್ತಗಳಲ್ಲಿ ನಿರ್ಮಿಸಲಾಗುತ್ತಿರುವ ಕಲಾಕೃತಿಗಳು ಮತ್ತು ಡ್ರೋನ್ ಪ್ರದರ್ಶನದಲ್ಲಿ ಮಾಡುತ್ತಿರುವ ಕಲಾಕೃತಿಗಳ ಕುರಿತು ಮಾಹಿತಿ ನೀಡಿದರು.

ಯೋಜನೆಗಳ ಪ್ರಗತಿಗೆ ವೇಗ ನೀಡಿ

ಇದೇ ವೇಳೆ ಕುಸುಮ್-ಸಿ ಹಾಗೂ ಕುಸುಮ್-ಬಿ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಕೆ.ಜೆ.ಜಾರ್ಜ್ ಅವರು, “ನಿಗದಿತ ಗುರಿ ಹಾಗೂ ಪ್ರಗತಿ ಸಾಧಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಅಂತೆಯೇ ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು,” ಎಂದು ಹೇಳಿದರು.

“ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಬಹುತೇಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮೊದಲು ಜನಪ್ರತಿನಿಧಿಗಳ ಗಮನಕ್ಕೆ ತರುತ್ತಾರೆ. ಹೀಗಾಗಿ ಜನಪ್ರತಿನಿಧಿಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಸಮಸ್ಯೆಗಳನ್ನು ಪರಿಹರಿಸಬೇಕು,” ಎಂದು ಸಚಿವ ಕೆ.ಜೆ. ಜಾರ್ಜ್ ಸೂಚಿಸಿದರು.

ಸಭೆಯಲ್ಲಿ ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯ್ಯೂಬ್ ಖಾನ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್. ಅರ್ಚನಾ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಾ. ಸಂತೃಪ್ತ್ ಸೇರಿದಂತೆ ಸೆಸ್ಕ್ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

400 ಕೆವಿ ಉಪ ಕೇಂದ್ರ ಪರಿಶೀಲನೆ

ಇದಕ್ಕೂ ಮುನ್ನ ಕಡಕೋಳದಲ್ಲಿ ಕೆಪಿಟಿಸಿಎಲ್‌ ವತಿಯಿಂದ ನಿರ್ಮಿಸುತ್ತಿರುವ 400 ಕೆವಿ ಉಪ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್ ಅವರು, ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.‌

 

 

 

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಸರಾ ಮಹೋತ್ಸವ ರಥ ಮುಂದೆಯೂ ಸಾಂಗವಾಗಿ ಸಾಗಲಿ- ಲೇಖಕಿ ವೈದೇಹಿ

ಉಡುಪಿ,ಸೆಪ್ಟಂಬರ್‌,25,2026 (www.justkannada.in) ವಿಜಯನಗರ ಸಾಮ್ರಾಜ್ಯ ಕಾಲದಿಂದ ದಸರಾ ಮಹೋತ್ಸವದ ರಥ ಸಾಗುತ್ತಿದೆ....

ದಸರಾ ಸಂಭ್ರಮ: ಟ್ರಾಫಿಕ್ ನಿರ್ವಹಣೆಗೆ ಡಿಜಿಟಲ್ ತಂತ್ರಜ್ಞಾನ, ಸುಗಮ ಸಂಚಾರಕ್ಕೆ ಹೊಸ App.

  ಮೈಸೂರು, ಸೆ.25, 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ...

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...