4
March, 2026

A News 365Times Venture

4
Wednesday
March, 2026

A News 365Times Venture

ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ

Date:

ನವದೆಹಲಿ,ಫೆಬ್ರವರಿ,8,2025 (www.justkannada.in): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿರುವ ಹೆಚ್.ಡಿಕುಮಾರಸ್ವಾಮಿ, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವ ಹೆಚ್ ಡಿಕೆ ತಿಳಿಸಿದ್ದಾರೆ.

Key words: Delhi Assembly, results, Union Minister, HDK

The post ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...