8
July, 2025

A News 365Times Venture

8
Tuesday
July, 2025

A News 365Times Venture

ದೊಡ್ಡಗಡಿಯಾರದ ಶಾಶ್ವತ ಚಿತ್ರಾತ್ಮಕ ಮುದ್ರೆ ಬಿಡುಗಡೆ

Date:

ಮೈಸೂರು,ಮೇ,24,2025 (www.justkannada.in): ಶಾಶ್ವತ ಚಿತ್ರಾತ್ಮಕ ಮುದ್ರೆ (Permanent Pictorial cancellation)ಗಳು ಪ್ರವಾಸಿಗರನ್ನು ಆಕರ್ಷಿಸುವ ಜೊತೆಗೆ ಆ ಸ್ಥಳದ ಪ್ರಾಮುಖ್ಯತೆಯನ್ನು ಜಗತ್ತಿಗೆ ಪ್ರಚುರ ಪಡಿಸುತ್ತವೆ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ. ಹರೀಶ್  ಹೇಳಿದರು.

ಮೈಸೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಭಾರತೀಯ ಅಂಚೆ ಹೊರ ತಂದಿರುವ ಮೈಸೂರು ನಗರದ ದೊಡ್ಡ ಗಡಿಯಾರ (ಸಿಲ್ವರ್ ಜ್ಯುಬಿಲಿ ಕ್ಲಾಕ್ ಟವರ್) ದ ಶಾಶ್ವತ ಚಿತ್ರಾತ್ಮಕ ಮುದ್ರೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಮೈಸೂರು ದೇಶದ ಪ್ರಮುಖ ಪ್ರವಾಸಿ ತಾಣವಾಗಿದ್ದು ಈ ಶಾಶ್ವತ ಚಿತ್ರಾತ್ಮಕ ಮುದ್ರೆಯು ವಿಶ್ವದ ಪ್ರವಾಸಿಗರಿಗೆ ದೊಡ್ಡ ಗಡಿಯಾರದ ಮಹತ್ವವನ್ನು ತಿಳಿಸುತ್ತದೆ ಎಂದು ತಿಳಿಸಿದರು.

ದೊಡ್ಡಗಡಿಯಾರ ಮೈಸೂರಿನ ಪ್ರಮುಖ ಆಕರ್ಷಣೆಗಳಲ್ಲೊಂದಾಗಿದ್ದು ನಗರದ ಹೆಗ್ಗುರುತಾಗಿದೆ ಎಂದು ಹೇಳಿದ ಮೈಸೂರು ಅಂಚೆವಿಭಾಗದ ಉಪ ಅಧೀಕ್ಷಕ ವಿ.ಎಲ್.ನವೀನ್ ಅವರು ಇನ್ನೆರಡು ವರ್ಷಗಳಲ್ಲಿ ದೊಡ್ಡ ಗಡಿಯಾರ ನಿರ್ಮಾಣವಾಗಿ 100 ವರ್ಷಗಳಾಗಲಿದ್ದು ಅಂಚೆ ಇಲಾಖೆ ವಿಶೇಷ ಲಕೋಟೆ ಅಥವಾ ಚಿತ್ರಿದ ಅಂಚೆ ಕಾರ್ಡ್ ಅನ್ನು ಹೊರತರುವ ಆಶಯವನ್ನು ಹೊಂದಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮೈಸೂರು ಪ್ರಧಾನ ಅಂಚೆಕಚೇರಿಯ ಹಿರಿಯ ಅಂಚೆ ಪಾಲಕ ಸೋಮಯ್ಯ ಅವರು ದೊಡ್ಡಗಡಿಯಾರದ ಶಾಶ್ವತ ಚಿತ್ರಾತ್ಮಕ ಮುದ್ರೆಯನ್ನು ಬಿಡುಗಡೆ ಮಾಡುವ ಮೂಲಕ ಅಂಚೆ ಇಲಾಖೆ ಅದರ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಲಕ್ಷ್ಮೀಪುರಂ ಅಂಚೆ ಕಚೇರಿಯ ಪ್ರಭಾರ ಅಂಚೆಪಾಲಕರಾದ ಬಿ.ಮಹದೇವಸ್ವಾಮಿ ಹಾಜರಿದ್ದರು. ನಿವೇದಿತಾ ಅವರ ಪ್ರಾರ್ಥನೆಯಿಂದ ಆರಂಭವಾದ ಕಾರ್ಯಕ್ರಮಕ್ಕೆ ಮಾರುಕಟ್ಟೆ ವ್ಯವಸ್ಥಾಪಕ ಡಾ. ಅಮ್ಮಸಂದ್ರ ಸುರೇಶ್ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು, ರೇಣುಕಾ ವಂದನಾರ್ಪಣೆ ಸಲ್ಲಿಸಿದರು.

Key words: release Permanent Pictorial cancellation, Clock Tower, Mysore

The post ದೊಡ್ಡಗಡಿಯಾರದ ಶಾಶ್ವತ ಚಿತ್ರಾತ್ಮಕ ಮುದ್ರೆ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...