ವಿಜಯನಗರ ,ಏಪ್ರಿಲ್,22,2025 (www.justkannada.in): ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಇಬ್ಬರು ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆಯ ಜಿಟ್ಟಿನಕಟ್ಟೆ ಗ್ರಾಮದ ಮದನಸ್ವಾಮಿ ಹಾಗೂ ಬಂಡ್ರಿ ಗ್ರಾಮದ ದೀಪಿಕಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ನಂತರ ಇಬ್ಬರು ನಾಪತ್ತೆಯಾಗಿದ್ದರು. ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಮದನ ಸ್ವಾಮಿ ದೀಪಿಕಾ ಫಲಿತಾಂಶ ಪ್ರಕಟವಾದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರು ಕೂಡ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು.
ಆದರೆ ರಿಸಲ್ಟ್ ದಿನದಿಂದ ನಾಪತ್ತೆಯಾಗಿದ್ದರು. ಎಲ್ಲಿ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದೀಗ ಒಂದೇ ಮರದಲ್ಲಿ ಇಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Lovers, commit, suicide, hanging
The post ದ್ವಿತೀಯ ಪಿಯು ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ.! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.