ಬೆಂಗಳೂರು,ಮೇ,29,2025 (www.justkannada.in): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇಂದು ಸದಾಶಿವ ನಗರದಲ್ಲಿ ಇರುವ ಬಿಕೆ ಹರಿಪ್ರಸಾದ್ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದರು.
ಭೇಟಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜಕೀಯ ಸೇರಿದಂತೆ ಮಂಗಳೂರಿನ ವಿಚಾರವನ್ನು ಚರ್ಚಿಸಿದ್ದೇವೆ. ಹಿಂದೂಗಳು ಮುಸ್ಲೀಮರ ನಡುವೆ ಯಾವುದೇ ದ್ವೇಷ ಇರಬಾರದು. ಮಂಗಳೂರಿಗೆ ಹೋಗಿ ಬನ್ನಿ ಎಂದು ಹರಿಪ್ರಸಾದ್ ಗೆ ಹೇಳಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಎಂದಿದ್ದೇನೆ ಎಂದು ತಿಳಿಸಿದರು.
ಬಿ.ಕೆ ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ.ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
Key words: CM Siddaramaiah, instructs, B.K. Hariprasad, visit, Dakshina Kannada
The post ದ.ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಬಿ.ಕೆ ಹರಿಪ್ರಸಾದ್ ಗೆ ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




