ಬೆಂಗಳೂರು,ಜೂನ್,3,2025 (www.justkannada.in): ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ನಟ ಕಮಲ್ ಹಾಸನ್ ಗೌರವಯುತವಾಗಿ ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪ, ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ, ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ದ ಮಾಡಿ ತೋರಿಸಿದ್ದಾರೆ.
ಇತಿಹಾಸ, ಭಾಷಾಶಾಸ್ತ್ರ ತಜ್ಞರಲ್ಲದ ಕಲಾವಿದ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖೇದನೀಯ ಮತ್ತು ಖಂಡನಾರ್ಹ. ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಬಿಎಸ್ ವೈ ತಿಳಿಸಿದ್ದಾರೆ.
Key words: Actor, Kamal Haasan, apologize, Kannadigas, BSY
The post ನಟ ಕಮಲ್ ಹಾಸನ್ ಗೌರವಯುತವಾಗಿ ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು- ಮಾಜಿ ಸಿಎಂ ಬಿಎಸ್ ವೈ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.