29
March, 2026

A News 365Times Venture

29
Sunday
March, 2026

A News 365Times Venture

ನನಗೆ IPL ಟಿಕೆಟ್’ ಬೇಡ: ಸರ್ಕಾರದ ನಡೆಗೆ ಶಾಸಕ ಎಸ್.ಸುರೇಶ್ ಕುಮಾರ್ ತೀವ್ರ ಅಸಮಾಧಾನ

Date:

ಬೆಂಗಳೂರು,ಮಾರ್ಚ್,28,2026 (www.justkannada.in): ಶಾಸಕರಿಗೆ ಉಚಿತ ಐಪಿಎಲ್ ಟಿಕೆಟ್ ನೀಡುವ ಸರ್ಕಾರದ ನಿರ್ಧಾರ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಧಾನಸಭೆಯ  ಸ್ಪೀಕರ್ ಗೆ ಪತ್ರ ಬರೆದಿರುವಂತ  ಶಾಸಕ ಸುರೇಶ್ ಕುಮಾರ್ ಅವರು, ಶಾಸಕರಿಗೆ ನೀಡಲಾಗುವ ಐಪಿಎಲ್ ಟಿಕೆಟ್ ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ. ತಮ್ಮ ಹೆಸರಲ್ಲಿ ಯಾವುದೇ ಟಿಕೆಟ್ ಪಾಸ್ ವಿತರಿಸದಂತೆ ಸ್ಪೀಕರ್ ಗೆ ಮನವಿ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿಚಾರ ಪ್ರಸ್ತಾಪಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸುರೇಶ್ ಕುಮಾರ್,  ಜನಸಾಮಾನ್ಯರು ಪಡುತ್ತಿರುವ ಕಷ್ಟಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಯಬೇಕಿತ್ತು. ಆದರೆ, ಅದರ ಬದಲಾಗಿ ಐಪಿಎಲ್ ಟಿಕೆಟ್ ಸಿಗುತ್ತಿಲ್ಲ, ಶಾಸಕರಿಗೆ ಮರ್ಯಾದೆ ಇಲ್ಲ ಎಂಬ ಬಗ್ಗೆ ಪಕ್ಷಾತೀತವಾಗಿ ಚರ್ಚೆ ನಡೆದದ್ದು ದುರದೃಷ್ಟಕರ ಎಂದಿದ್ದಾರೆ.

“ನಮ್ಮ ಅದೆಷ್ಟೋ ಪ್ರಶ್ನೆಗಳಿಗೆ ವರ್ಷಾನುಗಟ್ಟಲೆ ಫಲಿತಾಂಶ ಸಿಕ್ಕಿರುವುದಿಲ್ಲ. ಆದರೆ, ಶಾಸಕರ ವಿಷಯ ಬಂದ ತಕ್ಷಣ 24 ಗಂಟೆಯೊಳಗೆ ಸರ್ಕಾರ ಟಿಕೆಟ್ ಘೋಷಣೆ ಮಾಡಿದೆ. ದಯವಿಟ್ಟು ನನಗೆ ಆ ಟಿಕೆಟ್ ಖಂಡಿತ ಬೇಡ. ಈ ವಿಐಪಿ ಸಂಸ್ಕೃತಿ ನಮ್ಮನ್ನು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿ ಮಾಡುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Key words:  IPL ticket, MLA, S. Suresh Kumar Letter, Speaker

The post ನನಗೆ IPL ಟಿಕೆಟ್’ ಬೇಡ: ಸರ್ಕಾರದ ನಡೆಗೆ ಶಾಸಕ ಎಸ್.ಸುರೇಶ್ ಕುಮಾರ್ ತೀವ್ರ ಅಸಮಾಧಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು, ಮಾರ್ಚ್, 28,2026 (www.justkannada.in): ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ...

ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಇರಾನ್ ಭಾರತದ ಮಿತ್ರ ರಾಷ್ಟ್ರ. ಹೀಗಾಗಿ ನಮ್ಮ ಹಡಗುಗಳನ್ನು...

ಉತ್ತರ ಕರ್ನಾಟಕದ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ್ ತಿರುಗೇಟು ನೀಡಿದ  ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು...

ʼಮುಖ್ಯಮಂತ್ರಿ ಪದಕʼ ಪ್ರಕಟ: ಮೈಸೂರಿನ ನಾಲ್ವರು ಸೇರಿ ರಾಜ್ಯದ 153 ಪೊಲೀಸರಿಗೆ ಗೌರವ

  ಬೆಂಗಳೂರು, ಮಾ.೨೮,೨೦೨೬ : 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal)...