ಬೆಂಗಳೂರು,ಮಾರ್ಚ್,6,2025 (www.justkannada.in): ಟೀಕಿಸುವ ಭರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಾಲಿಗೆ ಹರಿಬಿಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮಂಡಿನೋವಿನಿಂದ ಬಳಲುತ್ತಿದ್ದು ವೀಲ್ ಚೇರ್ ನಲ್ಲಿಯೇ ಓಡಾಡುತ್ತಿದ್ದಾರೆ. ಈ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ.
ದಲಿತರ ಹಣ ದುರ್ಬಳಕೆಯಾಗಿದೆ. 25 ಸಾವಿರ ಕೋಟಿ ರೂ. ದುರ್ಬಳಕೆಯಾಗಿದೆ. ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ಕುಂಟುತ್ತಿದ್ದೀರಿ. ದಲಿತರ ಹಣ ದುರುಪಯೋಗ ಮಾಡಿಕೊಂಡಿದ್ದಕ್ಕೆ ಇಂದು ವಲ್ ಚೇರ್ ನಲ್ಲಿ ಬರುವಂತಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
Key words: CM Siddaramaiah, knee pain, Chalavadi Narayanaswamy
The post ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ಕುಂಟುತ್ತಿದ್ದೀರಿ: ಸಿಎಂ ವಿರುದ್ದ ನಾಲಿಗೆ ಹರಿಬಿಟ್ಟ ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.