ದಾವಣಗೆರೆ,ಏಪ್ರಿಲ್,2,2026 (www.justkannada.in): ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಒಳಮೀಸಲಾತಿ ಜಾರಿ ಮಾಡಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಯಾವಾಗ ಅಹಿಂದ ಬಗ್ಗೆ ಪ್ರೀತಿ ಬಂತು. ಅವರು ಕೋಮುವಾದ ಹಿಂದುತ್ವ ಬಗ್ಗೆ ಮಾತಾಡುವ ಜನ. ಬಿಜೆಪಿ ಶ್ರೀಮಂತರ ಪರ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಬಡವರ ಪರ ಇದೆ ಎಂದರು.
ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಬಿಜೆಪಿ ನಾಯಕರ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ ರೂ.ಕೊಡುತ್ತಿದ್ದೇವೆ. ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತಾಡೋದು ಸರಿಯಲ್ಲ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಕೇಂದ್ರ ನಮ್ಮ ರಾಜ್ಯಕ್ಕೆ ಕೊಡಬೇಕಾದ ಹಣ ಕೊಟ್ಟಿಲ್ಲ ಬರಬೇಕಾದ ಅನುದಾನ ಬಾರದ ಕಾರಣ ನಮಗೆ ತೊಂದರೆ ಆಗಿದೆ. ಆದರೆ ಗ್ಯಾರಂಟಿ ಯೋಜನೆಗಳಿಂದ ಯಾವುದೇ ತೊಂದರೆ ಆಗಿಲ್ಲ ಎಂದರು.
Key words: Our government, implement, internal reservation, CM Siddaramaiah
The post ನಮ್ಮ ಸರ್ಕಾರ ಸದೃಢ: ಒಳಮೀಸಲಾತಿ ಜಾರಿಗೆ ನಾವು ಬದ್ಧ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




