ಹಾವೇರಿ,ಮೇ,19,2025 (www.justkannada.in): ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಚಿವ ಸಂಪುಟ ವಿಸ್ತರಣೆಯಾದರೆ ನನ್ನನ್ನು ಪರಿಗಣಿಸಬೇಕು ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಆಗ್ರಹಿಸಿದ್ದಾರೆ.
ಹಾವೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರುದ್ರಪ್ಪ ಲಮಾಣಿ ಅವರು, ನಮ್ಮ ಸಮುದಾಯದಿಂದ ನಾನೊಬ್ಬನೇ ಶಾಸಕನಿದ್ದೇನೆ. ಹೀಗಾಗಿ ಸಂಪುಟ ವಿಸ್ತರಣೆಯಾಗುವ ವೇಳೆ ನನ್ನನ್ನು ಪರಿಗಣಿಸಲಿ. ಕಳೆದ ಬಾರಿಯೂ ನನಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇತ್ತು. ಆದರೆ ರಣದೀಪ್ ಸುರ್ಜೆವಾಲಾ ಅವರು ಡಿಪ್ಯೂಟಿ ಸ್ಪೀಕರ್ ಮಾಡಿದರು. ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಆದರೆ ನನ್ನನ್ನು ಪರಿಗಣಿಸಲಿ ಎಂದರು.
ಇನ್ನು ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ನಡೆದ ಬಳಿಕ ಸಚಿವ ಸಂಪುಟ ವಿಸ್ತರಣೆ ಚರ್ಚೆಗೆ ಬರುವ ಸಾಧ್ಯತೆ ಇದ್ದು ಈಗಾಗಲೇ ಶಾಸಕ ಕೆಎಂ ಶಿವಲಿಂಗೇಗೌಡ ಸೇರಿ ಹಲವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
Key words: aspirant, ministerial post, Deputy Speaker, Rudrappa Lamani
The post ನಾನು ಸಚಿವ ಸ್ಥಾನದ ಆಕಾಂಕ್ಷಿ: ಸಂಪುಟ ವಿಸ್ತರಣೆ ವೇಳೆ ನನ್ನನ್ನೂ ಪರಿಗಣಿಸಿ-ಉಪಸಭಾಪತಿ ರುದ್ರಪ್ಪ ಲಮಾಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.