ಬೆಂಗಳೂರು,ಜೂನ್,26,2025 (www.justkannada.in): ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಾಲ್ಕು ಹುಲಿಗಳ ಅಸಹಜ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.
ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿದ್ದು, ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, ಅರಣ್ಯದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿ. ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ. ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
Key words: ‘Unnatural death, four tigers, Minister, Eshwar Khandre , investigation
The post ನಾಲ್ಕು ಹುಲಿಗಳ ಅಸಹಜ ಸಾವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.