ಬೆಂಗಳೂರು,ಫೆಬ್ರವರಿ28,2025 (www.justkannada.in): ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಬೇಕು
ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು. ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ ವಿಧಿಸಲಾಗಿದೆ.
ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ.
Key words: Second PU, exams, begin, tomorrow
The post ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.