ಬೆಂಗಳೂರು,ಜೂನ್,7,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಘಟನೆಯನ್ನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ನಾಳೆ ಬೆಂಗಳೂರಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬಳಿಯಿರುವ ಗಾಂಧಿ ಪ್ರತಿಮೆಯ ಬಳಿ ಬಿಜೆಪಿಯ ಸಂಸದರು, ಶಾಸಕರು, ಕಾರ್ಯಕರ್ತರು ಸೇರಿದಂತೆ ವಿವಿಧ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸರಿಯಾಗಿ ವ್ಯವಸ್ಥೆ ಮಾಡದ ಹಿನ್ನೆಲೆ ಕಾಲ್ತುಳಿತದಿಂದ 11 ಜನರ ಸಾವಾಗಿದ್ದು ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಬಿಜೆಪಿ ಆರೋಪಿಸಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.
Key words: BJP, Protests, against, state government, tomorrow
The post ನಾಳೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.