ಬೆಂಗಳೂರು,, ಫೆಬ್ರವರಿ,28,2026 (www.justkannada.in): ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಆದೇಶ ಹೊರಡಿಸಿದ್ದು, ಈಗಾಗಲೇ ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳಲಿರುವ ಪ್ರಾಧಿಕಾರಗಳ ಅಧ್ಯಕ್ಷರುಗಳ ಇದು ಅನ್ವಯವಾಗಲಿದೆ. ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ.
ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರುಗಳ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ.
ಈ ಆದೇಶದ ಅನ್ವಯ ಆಡಳಿತ ಇಲಾಖೆಯ ಸಂಬಂಧಿಸಿದ ಅಧಿನಿಯಮ/ನಿಯಮಗಳ ರೀತಿ ತಕ್ಷಣದಿಂದ ಅಧ್ಯಕ್ಷರು ಕಾರ್ಯನಿರ್ವಹಿಸಲು ಸೂಕ್ತ ಅಧಿಸೂಚನೆ ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Key words: Extension, term, chairpersons, corporations, boards, authorities
The post ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




