16
June, 2026

A News 365Times Venture

16
Tuesday
June, 2026

A News 365Times Venture

ನೀಟ್ ಮರು ಪರೀಕ್ಷೆ:  ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ನಿರ್ದೇಶನ

Date:

ಮಂಡ್ಯ,ಜೂನ್,16,2026 (www.justkannada.in): ನೀಟ್ ಮರು ಪರೀಕ್ಷೆಯು ಜೂನ್ 21ರಂದು  ನಡೆಯಲಿದ್ದು, ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ ಡಾ.ಕುಮಾರ, ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 1958 ವಿದ್ಯಾರ್ಥಿಗಳು ಹಾಜರಾಗಲಿದ್ದು, 4 ಪರೀಕ್ಷೆ ಕೇಂದ್ರಗಳಾದ ಪಿ. ಇ.ಎಸ್ ಇಂಜಿನಿಯರಿಂಗ್ ಕಾಲೇಜು  ಮಂಡ್ಯ, ಪಿ.ಇ.ಎಸ್ ವಿಜ್ಞಾನ ಕಲಾ ಮತ್ತು ವಾಣಿಜ್ಯ ಕಾಲೇಜು ಮಂಡ್ಯ, ಸರ್ಕಾರಿ ಮಹಿಳಾ ಕಾಲೇಜು ಮಂಡ್ಯ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು( ಕಲ್ಲು ಕಟ್ಟಡ) ಮಂಡ್ಯ ಈ ಪರೀಕ್ಷಾ ಕೇಂದ್ರಗಳಲ್ಲಿ  ನೀಟ್ ಪರೀಕ್ಷೆ ನಡೆಯಲ್ಲಿದೆ.

ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.

ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಲ್ಲಿ ಯಾವುದೇ ಲೋಪಗಳು ಕಂಡುಬಾರದಂತೆ, ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಹಾಗೂ ವಿವಿಧ ಇಲಾಖೆಗಳು ಪರೀಕ್ಷೆಯ ಅವಧಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಶೋಭಾರಾಣಿ, ಮಂಡ್ಯ ಉಪ ವಿಭಾಗಧಿಕಾರಿ ಶಿವಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Key words: NEET, re-examination, Mandya, DC, guidelines

The post ನೀಟ್ ಮರು ಪರೀಕ್ಷೆ:  ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ನಿರ್ದೇಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳದ ‘ಸೌಜನ್ಯ ಪ್ರಕರಣ’ ಕುರಿತು ನಾಳೆ ನಟ ಪ್ರಕಾಶ್ ರಾಜ್ ಪತ್ರಿಕಾಗೋಷ್ಠಿ

ಬೆಂಗಳೂರು,ಜೂನ್,16,2026 (www.justkannada.in): ನಟ ಪ್ರಕಾಶ್ ರಾಜ್ ಅವರು ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ...

RSS ಸದಸ್ಯರು ಹಿಂದೂಗಳಲ್ಲ, ಬದಲಿಗೆ ಹಿಂದುತ್ವವಾದಿಗಳು- ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜೂನ್, 16,2026 (www.justkannada.in):  ಆರ್ ಎಸ್ ಎಸ್ ನೋಂದಣಿ ವಿಚಾರಕ್ಕೆ...

13 ದಿನಗಳ ನಂತರ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜೂನ್,16,2026 (www.justkannada.in): ಪೂರ್ಣ ಪ್ರಮಾಣದ ಖಾತೆ ನೀಡಿಲ್ಲ ಎಂಧು ಅಸಮಾಧಾನಗೊಂಡು ಖಾತೆಯಿಂದ...

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,15,2026 (www.justkannada.in): ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ವಿಪಕ್ಷಗಳ...