13
July, 2025

A News 365Times Venture

13
Sunday
July, 2025

A News 365Times Venture

ನ್ಯಾಯಾಲಯಕ್ಕೆ ನಟ ದರ್ಶ‍ನ್ ಗೈರು: ಎಚ್ಚರಿಕೆ ಕೊಟ್ಟ ನ್ಯಾಯಾಧೀಶರು

Date:

ಬೆಂಗಳೂರು,ಏಪ್ರಿಲ್,8,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ನಟ ದರ್ಶನ್ ಗೆ ಮುಂದಿನ ವಿಚಾರಣೆ ವೇಳೆ ಹಾಜರಾಗುವಂತೆ 57ನೇ ಸಿಸಿಹೆಚ್  ನ್ಯಾಯಾಲಯ ಎಚ್ಚರಿಕೆ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸಿಸಿಹೆಚ್  ನ್ಯಾಯಾಲಯ ಇಂದು ವಿಚಾರಣೆ ನಡೆಯಿತು . ವಿಚಾರಣೆ ವೇಳೆ ನಟ ದರ್ಶನ್ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ ಪರ ವಕೀಲರು ಅನಾರೋಗ್ಯ ಹಿನ್ನೆಲೆ ಹಾಜರಾತಿಯಿಂದ ವಿನಾಯಿತಿ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದೇ ವೇಳೆ ನಟ ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾಧೀಶರು,  ಮುಂದಿನ ವಿಚಾರಣೆ ವೇಳೆ ಹಾಜರಾಗಬೇಕು. ಕೇಸ್ ವಿಚಾರಣೆ ಇದ್ದ ದಿನ ಹಾಜರಾಗಬೇಕು.  ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರಾಗಬಾರದು ಎಂದು ಸೂಚನೆ ನೀಡಿ ವಿಚಾರಣೆಯನ್ನ ಮೇ 20ಕ್ಕೆ ಮುಂದೂಡಿಕೆ ಮಾಡಿದರು.

Key words: Actor Darshan, absent,  court,  Judge, warning

The post ನ್ಯಾಯಾಲಯಕ್ಕೆ ನಟ ದರ್ಶ‍ನ್ ಗೈರು: ಎಚ್ಚರಿಕೆ ಕೊಟ್ಟ ನ್ಯಾಯಾಧೀಶರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...