16
July, 2025

A News 365Times Venture

16
Wednesday
July, 2025

A News 365Times Venture

ಪರಿಸ್ಥಿತಿ ನಿಯಂತ್ರಣದಲ್ಲಿದೆ: ವದಂತಿಗಳಿಗೆ ಕಿವಿ ಕೊಡಬೇಡಿ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನವಿ

Date:

ಲಕ್ನೋ,ಜನವರಿ,29,2025 (www.justkannada.in):  ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ ಸಂಬಂಧ ಘಟನಾ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು,  ಭಕ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮನವಿ ಮಾಡಿದ್ದಾರೆ.

ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಬಂಧ ಸಭೆ ನಡೆಸಿದ ಬಳಿಕ ಮಾತನಾಡಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್, ‘ಪ್ರಯಾಗ್‌ ರಾಜ್‌ನಲ್ಲಿ ಇಂದು ಸುಮಾರು 8ರಿಂದ 10 ಕೋಟಿ ಭಕ್ತರು ಸೇರಿದ್ದಾರೆ. ತ್ರಿವೇಣಿ ಸಂಗಮದತ್ತ ಅಸಂಖ್ಯಾತ ಜನರು ಸೇರುತ್ತಿದ್ದಾರೆ. ಅಖಾರ ಮಾರ್ಗದಲ್ಲಿ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿ ಕೆಲವು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ’ ಎಂದು  ಮಾಹಿತಿ ನೀಡಿದರು.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಗೃಹ ಕಾರ್ಯದರ್ಶಿ, ಸಿಎಂ ಕಚೇರಿ ಅಧಿಕಾರಿಗಳು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರೊಂದಿಗೆ ಸಭೆ ನಡೆಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ. ಸದ್ಯ ಪ್ರಯಾಗ್‌ ರಾಜ್‌ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಭಕ್ತರು ಯಾವುದೇ ವದಂತಿಗಳಿಗೆ ಕಿವಿ ಕೊಡಬಾರದು ಎಂದು ಭಕ್ತರಿಗೆ ಮನವಿ ಮಾಡುತ್ತೇನೆ’ ಎಂದಿದ್ದಾರೆ.

Key words: Mahakumba mela, Situation,control, UP CM, Yogi Adityanath

The post ಪರಿಸ್ಥಿತಿ ನಿಯಂತ್ರಣದಲ್ಲಿದೆ: ವದಂತಿಗಳಿಗೆ ಕಿವಿ ಕೊಡಬೇಡಿ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...