ಬೆಂಗಳೂರು,ಮೇ,13,2025 (www.justkannada.in): ಕಾಲೇಜು ಕಾರ್ಯಕ್ರಮವೊಂದರಲ್ಲಿ ಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡವನ್ನ ಹೋಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕನ್ನಡಿಗ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಗಾಯಕ ಸೋನು ನಿಗಮ್ ಇಂದು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಸೋನ್ ನಿಗಮ್ ಗಾಯನ ಮಾಡುತ್ತಿದ್ದ ವೇಳೆ ಕನ್ನಡ ಹಾಡು ಹೇಳಿಎಂದಿದ್ದಕ್ಕೆ ಸೋನು ನಿಗಮ್ ಏಕಾಏಕಿ ಗರಂ ಆಗಿ ‘ಕನ್ನಡ.. ಕನ್ನಡ.. ಇದೇ ಕಾರಣ ಪಹಲ್ಗಾಮ್‌ನಲ್ಲಿ ಆಗಿರುವುದಕ್ಕೆ ಎಂದಿದ್ದರು. ಈ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಸೋನು ನಿಗಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಪೀಠದ ಮುಂದೆ ಬಂದಿದ್ದು, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿಕೆ ಮಾಡಿದೆ.
Key words: Pahalgam attack, Kannada, Sonu Nigam, High Court, FIR
The post ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.