ಬೆಂಗಳೂರು ,ಏಪ್ರಿಲ್,30,2025 (www.justkannada.in): ಮಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕಾಗಿ ಅಪರಿಚಿತ ವ್ಯಕ್ತಿಯನ್ನು ಹೊಡೆದು ಕೊಲ್ಲಲಾಗಿದೆ ಎಂದು ವರದಿಯಾಗಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಂಗಳೂರಿನಲ್ಲಿ ಗುಂಪು ಹತ್ಯೆ ಪ್ರಕರಣದಲ್ಲಿ 20 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಕ್ಕೆ ಹೊಡೆದಿದ್ದಾರೆ. ಅವನು ಜಿಂದಾಬಾದ್ ಘೋಷಣೆ ಕೂಗಿದ್ದಾನೋ, ಗೊತ್ತಿಲ್ಲ. ಈ ಬಗ್ಗೆ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ 20 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಹತ್ಯೆಯಾದವನ ಗುರುತು ಇನ್ನೂ ತಿಳಿದುಬಂದಿಲ್ಲ, ಅವರು ಸ್ಥಳೀಯರೋ ಅಥವಾ ರಾಜ್ಯದ ಹೊರಗಿನವರೋ ಎಂಬುದು ನಮಗೆ ಇನ್ನೂ ತಿಳಿದಿಲ್ಲ. ಪ್ರಾಥಮಿಕ ವರದಿಗಳ ಆಧಾರದ ಮೇಲೆ, ಪಂದ್ಯದ ಸಮಯದಲ್ಲಿ ಆ ವ್ಯಕ್ತಿ ಘೋಷಣೆಗಳನ್ನು ಕೂಗಿದ್ದಾನೆ ಎಂದು ಹೇಳಲಾಗಿದ್ದು, ಇದು ಗುಂಪು ದಾಳಿಗೆ ಕಾರಣವಾಯಿತು ಎಂದು ಪರಮೇಶ್ವರ್ ಹೇಳಿದ್ದಾರೆ.
ಏಪ್ರಿಲ್ 27 ರಂದು ಕುಡುಪು ಪ್ರದೇಶದ ಕಲ್ಲುರ್ಟಿ ದೇವಸ್ಥಾನದ ಬಳಿ ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ “ಪಾಕಿಸ್ತಾನ ಜಿಂದಾಬಾದ್” ಎಂದು ಕೂಗಿದ ಬಳಿಕ ವ್ಯಕ್ತಿಯೊಬ್ಬರನ್ನು ಒಂದು ಗುಂಪು ಹತ್ಯೆ ಮಾಡಿದೆ. ನಂತರ ಆತನ ಮೃತದೇಹ ಪತ್ತೆಯಾಗಿತ್ತು.
Key words: pro-Pak, slogans, killed, 20 arrested,Home Minister, Parameshwar
The post ಪಾಕ್ ಪರ ಘೋಷಣೆ ಕೂಗಿದ ವ್ಯಕ್ತಿ ಹತ್ಯೆ: ಈವರೆಗೆ 20 ಮಂದಿ ಬಂಧನ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.