ಬೆಂಗಳೂರು, ಏಪ್ರಿಲ್ ,28,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಾಕ್ ವಿರುದ್ದ ಯುದ್ದದ ಅನಿವಾರ್ಯತೆ ಇಲ್ಲ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ಅವರ ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ದೃಷ್ಟಿಕೋನ ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗಾಗಿ ಸಿಎಂ ಸಿದ್ದರಾಮಯ್ಯ ದೇಶದ ಜನರ ಕ್ಷಮೆ ಕೂಡ ಕೇಳಬೇಕು ಎಂದು ಒತ್ತಾಯಿಸಿದರು.
ಜಾತಿ ಗಣತಿ ವರದಿ ಕುರಿತು ಸಿಎಂ ಸಿದ್ದರಾಮಯ್ಯ ಸಭೆಗಳನ್ನ ನಡೆಸಿದ್ದು ಇತ್ತೀಚೆಗೆ ಕ್ಯಾಬಿನೆಟ್‍ನ ವಿಶೇಷ ಸಭೆ ಕರೆದಿದ್ದರು. ಕ್ಯಾಬಿನೆಟ್ ತೀರ್ಮಾನ ಕುರಿತು ನಿರ್ಣಯವೂ ಸಿದ್ಧವಿತ್ತು. ಆದರೂ ಕೂಡ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಲಿ ಎಂದು ಆಗ್ರಹಿಸಿದರು.
Key words: CM Siddaramaiah, apologize, People BJP, State president, BY Vijayendra
The post ಪಾಕ್ ವಿರುದ್ದ ಯುದ್ದದ ಅನಿವಾರ್ಯತೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.