26
March, 2026

A News 365Times Venture

26
Thursday
March, 2026

A News 365Times Venture

ಪಾರಂಪರಿಕ ಕಟ್ಟಡ ರಕ್ಷಣೆಗೆ ಪಾಲಿಕೆಯ ಕೊಡುಗೆ ಏನು? ಮಾಜಿ ಮೇಯರ್ ಶಿವಕುಮಾರ್  ಟೀಕೆ

Date:

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ. ಮೀಸಲು ಇಟ್ಟಿರುವ ಮಹಾನಗರ ಪಾಲಿಕೆ, ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ. ಹೀಗಾಗಿ ಮಹಾನಗರ ಪಾಲಿಕೆಗೆ ಮಂಡಿಸಲಾದ 2026-27ನೇ ಸಾಲಿನ ಆಯವ್ಯಯವು ಸತ್ವ ಇಲ್ಲದ ಬಜೆಟ್ ಆಗಿದೆ ಮಾಜಿ ಮೇಯರ್ ಶಿವಕುಮಾರ್ ಟೀಕಿಸಿದ್ದಾರೆ.

ಮಹಾನಗರ ಪಾಲಿಕೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮೇಯರ್ ಶಿವಕುಮಾರ್ ಅವರು, ನಾನು ಮೇಯರ್ ಆಗಿದ್ದಾಗ ಪಾರಂಪರಿಕ ಕಮಾನುಗಳ ರಕ್ಷಣೆಗಾಗಿ 3 ಕೋಟಿ ರೂ. ಅನುದಾನ ಮೀಸಲು ಇಟ್ಟಿದ್ದೆ. ಪಾರಂಪರಿಕ ಇಲಾಖೆಗೆ ಪ್ರಸ್ತಾವನೆಯನ್ನೂ ಸಲ್ಲಿಸಿದರೂ ಅನುದಾನ ಬಳಕೆ ಆಗಲಿಲ್ಲ. ಮೈಸೂರು ಪಾರಂಪರಿಕ ನಗರ ಎಂದು ಪ್ರಸಿದ್ಧಿಯಾಗಿದೆ. ಇಲ್ಲಿನ ಪಾರಂಪರಿಕ ಕಟ್ಟಡಗಳನ್ನು ಉಳಿಸುವುದು ಪಾಲಿಕೆಯ ಆದ್ಯತೆ ಕರ್ತವ್ಯ ಆಗಬೇಕಿತ್ತು. ವರ್ಷಕ್ಕೊಂದು ಪಾರಂಪರಿಕ ಕಟ್ಟಡ ಸಂರಕ್ಷಿಸಲು ಮುಂದಾಗಿದ್ದರೂ ಎಷ್ಟೋ ಅನುಕೂಲ ಆಗುತ್ತಿತ್ತು. ಆದರೆ ಇಡೀ ಬಜೆಟ್‌ ನಲ್ಲಿ ಪಾರಂಪರಿಕ ಕಟ್ಟಡಗಳ ಬಗ್ಗೆ ಪ್ರಸ್ತಾಪವೇ ಇಲ್ಲದೆ ಇರುವುದು ನಿರಾಸೆ ಮೂಡಿಸಿದೆ.

ಕೃಷ್ಣರಾಜ, ನರಸಿಂಹರಾಜ, ಚಾಮರಾಜ ಕ್ಷೇತ್ರಗಳಲ್ಲಿ ಮೂರು ಮಾರುಕಟ್ಟೆ ನಿರ್ಮಿಸುವುದಾಗಿ ಹೇಳಲಾಗಿದೆ. ಆದರೆ ನಗರದ ವಾಣಿ ವಿಲಾಸ ಮಾರುಕಟ್ಟೆ, ಮಂಡಿ ಮಾರುಕಟ್ಟೆ, ದೇವರಾಜ ಮಾರುಕಟ್ಟೆಗಳು ಕುಸಿದು ಬಿದ್ದಿವೆ. ಹಳೇ ಮಾರುಕಟ್ಟೆಗಳನ್ನು ರಿಪೇರಿ ಮಾಡಿಸಲು ಸಾಧ್ಯವಾಗದ ಪಾಲಿಕೆಯಿಂದ ಹೊಸ ಮಾರುಕಟ್ಟೆಗಳ ನಿರ್ಮಾಣ ಸಾಧ್ಯವೇ ? ಈಗ ಇರುವ ಶೌಚಾಲಯಗಳನ್ನೇ ನಿರ್ವಹಣೆ ಮಾಡಲು ಸಾಧ್ಯವಾಗದ ಪಾಲಿಕೆಯು ಪಾರಂಪರಿಕ ಶೈಲಿಯ ಹೊಸ ಶೌಚಾಲಯ ನಿರ್ಮಿಸಿರುವುದಾಗಿ ಘೋಷಿಸಿರುವುದು ಹಾಸ್ಯಾಸ್ಪದ ಎಂದು ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಅನುದಾನ ನಿರೀಕ್ಷೆಯಲ್ಲೂ ತಪ್ಪು ಮಾಹಿತಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ದಿವಾಳಿ ಆಗಿದ್ದು, ಮಹಾನಗರ ಪಾಲಿಕೆಯ ಸಿಬ್ಬಂದಿಯ ಸಂಬಳಕ್ಕೆ ತಗುಲುವ ಶೇ.20ರಷ್ಟು ಮೊತ್ತವನ್ನು ಸ್ಥಳೀಯ ಆದಾಯದಲ್ಲೇ ಭರಿಸುವಂತೆ ಸೂಚಿಸಿದೆ. ಹೀಗಿರುವಾಗ ರಾಜ್ಯ ಸರ್ಕಾರ ಎಸ್‌ಎಫ್‌ಸಿ ಅನುದಾನ ನೀಡಲಿದೆ ಎಂಬ ಆಶಾಗೋಪುರ ಕಟ್ಟಿಕೊಳ್ಳಲಾಗಿದೆ.

ಇನ್ನು 16ನೇ ಹಣಕಾಸು ಆಯೋಗದಿಂದ 103 ಕೋಟಿ ರೂ. ಅನುದಾನ ದೊರಕಲಿದೆ ಎಂದು ಬಜೆಟ್ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ. ಆರ್ಥಿಕ ಇಲಾಖೆಯ ಮಾರ್ಗಸೂಚಿಯ ಅನ್ವಯ, 16ನೇ ಹಣಕಾಸು ಆಯೋಗದಿಂದ ಹಣ ನೀಡಲು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸರ್ಕಾರ ಇರಬೇಕು. ಜತೆಗೆ 20 ವರ್ಷಗಳಿಂದಲೂ ಜಾರಿಯಲ್ಲಿರುವ ವಾಹನಗಳ ಜಿಪಿಎಸ್ ವ್ಯವಸ್ಥೆ, ಗುಣಮಟ್ಟ ಪರೀಕ್ಷಾ ಕೇಂದ್ರಗಳನ್ನು ಬಜೆಟ್‌ನಲ್ಲಿ ತೋರಿಸುವುದು ಇದೊಂದು ಕಾಟಾಚಾರದ ಬಜೆಟ್ ಎಂಬುದನ್ನು ನಿರೂಪಿಸುತ್ತಿದೆ ಎಂದು ದೂರಿದ್ದಾರೆ.

ಸ್ವಚ್ಚ ಸರ್ವೇಕ್ಷಣಾ ಅಭಿಯಾನದಲ್ಲಿ ಇಂದೋರ್ ಸತತವಾಗಿ ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ಹೀಗಾಗಿ  ಸ್ವಚ್ಚತೆಯಲ್ಲಿ ಇಂದೋರ್ ಮಾದರಿಯನ್ನು ಅಳವಡಿಸಿಕೊಳ್ಳಬೇಕು . ಆ ರೀತಿಯ ಯೋಜನೆಗಳನ್ನ ಘೋಷಣೇ ಮಾಡಬೇಕು.  ಆ ರೀತಿಯ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ. ಹಾಗೆಯೇ ಗುತ್ತಿಗೆದಾರರಿಗೆ  200 ಕೋಟಿ ರೂ. ಬಾಕಿ ಇದೆ. ಅದನ್ನ ಬಿಡುಗಡೆ ಮಾಡಿಲ್ಲ. ಇವರು ಹೇಗೆ ಉಳಿತಾಯ ಬಜೆಟ್ ಮಾಡಿದರೂ ಗೊತ್ತಿಲ್ಲ ಎಂದು ಶಿವಕುಮಾರ್ ಕಿಡಿಕಾರಿದರು.

Key words: Mysore city corporation, Budget, Former Mayor, Shivakumar

The post ಪಾರಂಪರಿಕ ಕಟ್ಟಡ ರಕ್ಷಣೆಗೆ ಪಾಲಿಕೆಯ ಕೊಡುಗೆ ಏನು? ಮಾಜಿ ಮೇಯರ್ ಶಿವಕುಮಾರ್  ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್

ನವದೆಹಲಿ,ಮಾರ್ಚ್,26,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು...

ಮುಡಾ (MDA) ಮಾಜಿ ಆಯುಕ್ತ ದಿನೇಶ್  ಮತ್ತೊಂದು ಹಗರಣ : ಮಾಸಿಕ ₹265 ಬಾಡಿಗೆಗೆ ಮೊಬೈಲ್ ಟವರ್ ಅನುಮತಿ!

  ಮೈಸೂರು, ಮಾ.೨೬,೨೦೨೬: ಮುಡಾ (MDA) ಮಾಜಿ ಆಯುಕ್ತ ದಿನೇಶ್ ಕುಮಾರ್ ಅವಧಿಯಲ್ಲಿ...

ಅಧಿವೇಶನದಲ್ಲಿ ಸರ್ಕಾರದ ತಪ್ಪು ಹೊರಗೆಳೆಯುವ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ- ಆರ್.ಅಶೋಕ್

ಬೆಂಗಳೂರು,ಮಾರ್ಚ್,26,2026 (www.justkannada.in):  ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಹೊರಗೆಳೆಯುವ  ಸರ್ಕಾರದ ಕಿವಿ...

 ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ- ಸಚಿವ ಕೆ.ಎಚ್ ಮುನಿಯಪ್ಪ ಮನವಿ

ಬೆಂಗಳೂರು,ಮಾರ್ಚ್,26,2026 (www.justkannada.in):  ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ. ಗ್ಯಾಸ್...