ಬೆಂಗಳೂರು,ಸೆಪ್ಟಂಬರ್, 10,2026 (www.justkannada.in): ತನ್ನ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ಸಂಬಂಧ ಕಳೆದ ಎರಡು ದಿನಗಳ ಹಿಂದೆ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಪ್ರದೀಪ್ ರಾಯ್ ಅವರನ್ನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.
ಇಬ್ಬರು ಆರೋಪಿಗಳನ್ನ ಪೊಲೀಸರು ಎರಡು ದಿನ ವಿಚಾರಣೆ ನಡೆಸಿದ್ದು ಇಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಇಬ್ಬರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
Key words: Prajwal Revanna, police custody, judicial custody
The post ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




