ಮೈಸೂರು,ಜೂನ್,24,2025 (www.justkannada.in): ಪ್ರತಿ ಮನೆಯಲ್ಲೂ ಮಕ್ಕಳು ಇರುವಂತೆ ಪುಸ್ತಕಗಳು ಇರಬೇಕು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ತಿಳಿಸಿದರು.
ಮೈಸೂರಿನ ಅಗ್ರಹಾರದಲ್ಲಿರುವ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಮಂಗಳವಾರ ಕರ್ನಾಟಕ ಸರ್ಕಾರ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಕಾರ್ಯಕ್ರಮ ನಡೆಯಿತು.
ಪ್ರತಿಯೊಬ್ಬರು ಪುಸ್ತಕಗಳನ್ನ ಓದಬೇಕು. ಇತ್ತೀಚೆಗೆ ಮೊಬೈಲ್ ಹಾವಳಿಯಿಂದ ಪುಸ್ತಕ ಓದುವವರ ಸಂಖ್ಯೆ ಕ್ಷೀಣಿಸಿದೆ. ಉತ್ತಮ ಬರಹಗಾರರು ಕಣ್ಮರೆ ಆಗುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಮೊಬೈಲ್ ನೀಡುವ ಬದಲು ಪುಸ್ತಕ ನೀಡಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಿಗೆ ಪತ್ರ ವಿತರಣಾ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಮಾನಸ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ದೀಪಕ್, ಉಪಾಧ್ಯಕ್ಷ ರವಿಪಾಂಡವಪುರ , ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತ ಅಧಿಕಾರಿ ಕರಿಯಪ್ಪ, ಮೈಸೂರಿನ ಸಂಚಾಲಕರಾದ ಚಂದ್ರಶೇಖರ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಪುರ ನಾರಾಯಣ ಹಾಗೂ ಇನ್ನಿತರರು ಹಾಜರಿದ್ದರು.
Key words: library, Dr. C.P. Krishnakumar, Mysore, District Journalists Association
The post ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯ ಇರಲಿ : ಡಾ.ಸಿ.ಪಿ ಕೃಷ್ಣಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.