23
January, 2026

A News 365Times Venture

23
Friday
January, 2026

A News 365Times Venture

ಪ್ರವಾಸದ ಮೂಲಕ  ಸಹಿಷ್ಣುತೆ ಮತ್ತು ಮನುಷ್ಯ ಪ್ರೀತಿಯನ್ನು ಹೆಚ್ಚಿಸಿಕೊಳ್ಳಬಹುದು- ಸಿ.ಎಂ.ಸಿದ್ದರಾಮಯ್ಯ

Date:

ಬೆಂಗಳೂರು ಜೂನ್, 4, 2025 (www.justkannada.in): ನಾನಾ ದೇಶಗಳ ಪ್ರವಾಸ ಮಾಡುವ ಮೂಲಕ ಸಹಿಷ್ಣುತೆ ಮತ್ತು ಮನುಷ್ಯ ಪ್ರೀತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಿಶ್ವವಾಣಿ ಮಾಧ್ಯಮ ಸಂಸ್ಥೆ FKCCI ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಪ್ರವಾಸಿ ಪ್ರಪಂಚ” ವಾರ ಪತ್ರಿಕೆಯನ್ನು ಜನಾರ್ಪಣೆಗೊಳಿಸಿ  ಮಾತನಾಡಿದರು.

ವಿಶ್ವೇಶ್ವರ ಭಟ್ ಅವರು ಸಾಹಸ ಪ್ರವೃತ್ತಿ ಉಳ್ಳವರು. ಈ ಪ್ರವೃತ್ತಿ ಇದ್ದರೇನೇ ಸಾಧನೆ ಮಾಡಲು ಸಾಧ್ಯ ಎಂದರು.

ಪ್ರವಾಸಿತಾಣಗಳಿಗೆ ಹೋಗುವುದು ಎಂದರೆ ಆ ಭಾಗದ ಪರಿಸರ, ಜನ‌ ಸಂಸ್ಕೃತಿ, ಜೀವನ ವಿಧಾನ ಎಲ್ಲವನ್ನೂ ಅರ್ಥ ಮಾಡಿಕೊಳ್ಳುವುದಾಗಿದೆ. ಆ ಮೂಲಕ ಮನುಷ್ಯ ಪ್ರೀತಿಯನ್ನು ಹೆಚ್ಚಿಸಿಕೊಳ್ಳುವುದಾಗಿದೆ, ಪರಸ್ಪರರ ಸಂಸ್ಕೃತಿ ಬಗ್ಗೆ ಸಹಿಷ್ಣುತೆಯನ್ನು ಬೆಳೆಸಿಕೊಳ್ಳುವುದಾಗಿದೆ ಎಂದರು.vtu

ವಿಶ್ವೇಶ್ವರ ಭಟ್ಟರು ವಿಶ್ವ ಪರ್ಯಟಣೆ ಮೂಲಕ ತಮ್ಮ ಬದುಕನ್ನು ಸಾರ್ಥಕ ಮಾಡಿಕೊಂಡಿದ್ದಾರೆ.  ವಿಶ್ವೇಶ್ವರ ಭಟ್ ಸಂಪಾದಕತ್ವದ ವಿಶ್ವವಾಣಿಯನ್ನು ನಾನೇ ಲೋಕಾರ್ಪಣೆ ಮಾಡಿದ್ದೆ. ಈಗ ಪ್ರವಾಸಿ ಪ್ರಪಂಚವನ್ನೂ ನಾನೇ ಲೋಕಾರ್ಪಣೆಗೊಳಿಸಿದ್ದೇನೆ. ನಾನು ವಿಶ್ವವಾಣಿಯನ್ನೂ ತಪ್ಪದೆ ನೋಡಿದ್ದೇನೆ ಎಂದರು.

ವಿಶ್ವೇಶ್ವರ ಭಟ್ಟರು 97 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇವರು ಹಲವು ಪತ್ರಿಕೆಗಳನ್ನೂ ಬೆಳೆಸಿದ್ದಾರೆ. ನಿಮ್ಮ ಪ್ರವಾಸದ ಅನುಭವ ಪ್ರವಾಸಿ ಪ್ರಪಂಚ ಪತ್ರಿಕೆಗೆ ಅನುಕೂಲವಾಗಲಿದೆ ಎಂದರು.

Key words: weekly magazine, Pravasi Mancha, Vishwavani, FKCCI, Siddaramaiah

The post ಪ್ರವಾಸದ ಮೂಲಕ  ಸಹಿಷ್ಣುತೆ ಮತ್ತು ಮನುಷ್ಯ ಪ್ರೀತಿಯನ್ನು ಹೆಚ್ಚಿಸಿಕೊಳ್ಳಬಹುದು- ಸಿ.ಎಂ.ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...