8
July, 2025

A News 365Times Venture

8
Tuesday
July, 2025

A News 365Times Venture

ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

Date:

 

ಬೆಂಗಳೂರು ಗ್ರಾಮಾಂತರ, ಮೇ,29,2025 (www.justkannada.in): ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ತರಬೇತಿ ಹಂತದಲ್ಲಿ ಒದಗಿಸುವ ಸೌಲಭ್ಯಗಳು :

ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸ ಖಾತರಿಯಾಗಿರುವುದು.

ತರಬೇತಿ ಪಡೆಯುವ ವೇಳೆ ರೂ.2000/- ಗಳು ಮಾಹೆಯಾನ ಸ್ಟೈಪೆಂಡ್ ನೀಡಲಾಗುವುದು.

ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟ ಹಾಗೂ ಸಮವಸ್ತ್ರಗಳನ್ನು ನೀಡಲಾಗುವುದು.

ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸದ ನೈಜ ಅನುಭವ ಸಹ ನೀಡಲಾಗುವುದು.

IHM, ಬೆಂಗಳೂರು ಹಾಗೂ FCI ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಸರ್ಟಿಫಿಕೇಟ್ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.

ತರಬೇತಿಗಳು:

  1. ಆಹಾರ ಮತ್ತು ಪಾನೀಯ ಸೇವೆ (Food and Beverage Service Steward) ಯ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು, SSLC ಅಥವಾ ಹತ್ತನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.
  2. ಬಹು ತಿನಿಸು ಅಡುಗೆ (Multi Cuisine Cook) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 5 ತಿಂಗಳ ತರಬೇತಿಯಿದ್ದು, 8ನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾದ ಜೂನ್ 12 ರಂದು ಸಂಜೆ 5:30 ರೂಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ:080-22040633 ಇವರನ್ನು ಕಚೇರಿಯ ಸಮಯದಲ್ಲಿ  ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: invitation, apply, skill development, training , Department of Tourism

The post ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ

ಮೈಸೂರು,ಜುಲೈ,8,2025 (www.justkannada.in):  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ...

ಜನೌಷಧ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು, ಜುಲೈ, 8,2025 (www.justkannada.in):  ರಾಜ್ಯದಲ್ಲಿ  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ, ಚರ್ಚಿಸಲು ಇದು ಸಮಯವಲ್ಲ – ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,8,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ...

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...