5
October, 2026

A News 365Times Venture

5
Monday
October, 2026

A News 365Times Venture

ಫಾರ್ಮ್​-7 ದುರ್ಬಳಕೆ: ಸ್ಪಷ್ಟನೆ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್

Date:

ಬೆಂಗಳೂರು, ಅಕ್ಟೋಬರ್,​​ 5,2026 (www.justkannada.in):  ರಾಜ್ಯದಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಸಂಬಂಧ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್, ‘ಒಂದು ದಿನಕ್ಕೆ 10 ಫಾರ್ಮ್ ಕೊಡಬಹುದು. ಬಿಎಲ್​ಎಗಳು ಒಟ್ಟು 50 ಫಾರ್ಮ್ ಕೊಡಬಹುದು. ಇದಕ್ಕೂ ಮೀರಿ ಫಾರ್ಮ್ ಬಂದರೆ ಇಆರ್​ಒ ನಿರ್ಧಾರ ಮಾಡುತ್ತಾರೆ. ಅದಕ್ಕಿಂತ ಹೆಚ್ಚು ಫಾರ್ಮ್ ಕೊಟ್ಟರೇ ಅಥವಾ ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿದರೆ ಕ್ರಮ ಕೈಗೊಳ್ಳಬಹುದು. ಆದರೆ ಫಾರ್ಮ್-7 ಸಂಬಂಧ ಈವರೆಗೆ ಯಾವುದೇ ಕೇಸ್​ ದಾಖಲಾಗಿಲ್ಲ, ಮತದಾರರ ಪಟ್ಟಿಯಿಂದ ಕೈಬಿಡಬೇಕೆಂದರೆ ಮೊದಲಿಗೆ ನೋಟಿಸ್ ನೀಡಲಾಗುತ್ತದೆ. ಬಳಿಕ ವಿಚಾರಣೆ ನಡೆಸಿದ ನಂತರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ತಿಳಿಸಿದರು.

ಅರ್ಹರನ್ನು ಮತ್ತೊಮ್ಮೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುತ್ತೇವೆ

ಅರ್ಹರನ್ನು ಮತ್ತೊಮ್ಮೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುತ್ತೇವೆ. ಈ ಬಗ್ಗೆ ವಿಶೇಷ ಜಾಗೃತಿ ಅಭಿಯಾನ ಮಾಡುತ್ತೇವೆ. ಅರ್ಹ ಮತದಾರರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲ್ಲ. ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವ ಕೆಲಸ ಆರಂಭವಾಗಲಿದೆ. ಫಾರ್ಮ್​ ನಂಬರ್ 6ನಲ್ಲಿ ಅಪ್ಲಿಕೇಶನ್ ಹಾಕಬಹುದು’ ಎಂದು ಅನ್ಬುಕುಮಾರ್ ತಿಳಿಸಿದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮ ಮತ್ತು ಜಾತಿ ಈ ದೇಶದ ದುರಂತ: ಕಫೀಲ್ ಖಾನ್

  Bangalore, oct.05,2026: ಧರ್ಮ ಮತ್ತು ಜಾತಿ ಈ ದೇಶವನ್ನು ನುಂಗಿಹಾಕುತ್ತಿದೆ ಎಂದು...

ಸಿಎಂ ಮೊನ್ನೆ ಡ್ರಾಮಾ ಮಾಡಿ ಚು.ಆಯೋಗದ ಮೇಲೆ  ಒತ್ತಡ ಹಾಕಿದ್ದಾರೆ- ಕೇಂದ್ರ ಸಚಿವ HDK

ಬೆಂಗಳೂರು, ಅಕ್ಟೋಬರ್,5,2026 (www.justkannada.in):  ಸಿಎಂ ಮೊನ್ನೆ ಡ್ರಾಮಾ ಮಾಡಿದ್ದಾರೆ. ಚುನಾವಣಾ ಆಯೋಗದ...

ವರುಣ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.183.78 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ- ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು ಅಕ್ಟೋಬರ್,5,2026 (www.justkannada.in): ವರುಣ ಕ್ಷೇತ್ರದಲ್ಲಿ ಒಟ್ಟು  ರೂ.183.78 ಕೋಟಿ ವೆಚ್ಚದ...

ವರುಣ ಜನರೇ ನನ್ನ ರಾಜಕೀಯ ಬದುಕಿನ ಶಕ್ತಿ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು, ಅಕ್ಟೊಬರ್,5,2026 (www.justkannada.in): ವರುಣ ಜನರೇ ನನ್ನ ರಾಜಕೀಯ ಬದುಕಿನ ಶಕ್ತಿ....