ಮೈಸೂರು,ಫೆ.25,2025 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರು ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿ ಇವರ ಸಹಯೋಗದಲ್ಲಿ ಬೆಂಗಳೂರು ಮತ್ತು ಮೈಸೂರು ಕಂದಾಯ ವಿಭಾಗಗಳ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 27 ಹಾಗೂ 28 ರಂದು ಮೈಸೂರು ವಿಶ್ವವಿದ್ಯಾಲಯದ ಮಾನವಿಕ ಸಭಾಂಗಣದಲ್ಲಿ ಮಾಧ್ಯಮ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಫೆಬ್ರವರಿ 27 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಮಾಧ್ಯಮ ಹಬ್ಬ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗವಹಿಸಲಿದ್ದಾರೆ.
ಚಾಮರಾಜ ಕ್ಷೇತ್ರದ ವಿಧಾನ ಸಭೆಯ ಶಾಸಕ ಕೆ. ಹರೀಶ್ ಗೌಡ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Media Festival, Mysore , feb 27th
The post ಫೆ. 27 ಮತ್ತು 28ರಂದು ಮೈಸೂರಿನಲ್ಲಿ ‘ಮಾಧ್ಯಮ ಹಬ್ಬ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.