ಬೆಂಗಳೂರು,ಫೆಬ್ರವರಿ,17,2025 (www.justkannada.in): ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಬಜೆಟ್ ನಲ್ಲಿ ರೈತರ ಬೇಡಿಕೆಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಸಿಎಂ.ಸಿದ್ದರಾಮಯ್ಯ ಭರವಸೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ ಎಂದು ತಿಳಿಸಿದರು.
ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಅಭಿನಂಧಿಸಿದರು.
Key words: Pre-budget, meeting, Farmers, CM Siddaramaiah
The post ಬಜೆಟ್ ಪೂರ್ವಭಾವಿ ಸಭೆ: ರೈತರ ಬೇಡಿಕೆಗಳಿಗೆ ಪ್ರಥಮ ಆದ್ಯತೆ- ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.