ಬೆಂಗಳೂರು,ಜೂನ್,19,2025 (www.justkannada.in): ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ.
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸುರೇಶ್ ಇಂದು ನಾಮಪತ್ರ ಸಲ್ಲಿಸಿದ್ದರು. ಇದೀಗ ಬೆಂಗಳೂರು ಹಾಲು ಒಕ್ಕುಟದ ಸದಸ್ಯರು ಹಾಗೂ ಚುನಾಯಿತರಿಂದ ಡಿ.ಕೆ ಸುರೇಶ್ ಬಮೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಮೂಲ್ ಕಚೇರಿ ಬಳಿ ಡಿ.ಕೆ ಸುರೇಶ್ ಬೆಂಬಲಿಗರು, ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಬಳಿಕ ಮಾತನಾಡಿದ ನೂತನ ಬಮೂಲ್’ ಅಧ್ಯಕ್ಷ ಡಿ.ಕೆ ಸುರೇಶ್, ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ.
ರೈತರು ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ರೈತರು ನನ್ನ ಮೇಲಿಟ್ಟಿರುವ ಭರವಸೆ ಉಳಿಸಿಕೊಳ್ಳುತ್ತೇನೆ ಅಧ್ಯಕ್ಷ ಸ್ಥಾನದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ ಎಂದು ತಿಳಿಸಿದ್ದಾರೆ.
Key words: Former MP, D.K. Suresh, Bamul, presidency
The post ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.