17
April, 2026

A News 365Times Venture

17
Friday
April, 2026

A News 365Times Venture

ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್

Date:

ಬೆಂಗಳೂರು,ಏಪ್ರಿಲ್,17,2026 (www.justkannada.in):  ಕರುನಾಡು ಬರದ ದವಡೆಗೆ ಸಿಲುಕುತ್ತಿರುವ ಈ ಸಂಕಷ್ಟದ ಸಮಯದಲ್ಲಿ, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಡಳಿತವನ್ನು ಗಾಳಿಗೆ ತೂರಿ ಕುರ್ಚಿಗಾಗಿ ದೆಹಲಿ ಪ್ರವಾಸದಲ್ಲಿ ಮಗ್ನರಾಗಿರುವುದು ಅತ್ಯಂತ ದುರದೃಷ್ಟಕರ ಎಂದು ವಿಪಕ್ಷ ನಾಯಕ ಆರ್.ಅಶೋಕ್   ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ಮುಂಗಾರು ಮಳೆ ಅಭಾವದ ಮುನ್ಸೂಚನೆ ಹಾಗೂ ಅಂತರ್ಜಲ ಮಟ್ಟದ ತೀವ್ರ ಕುಸಿತದ ವರದಿಗಳು ಆತಂಕಕಾರಿಯಾಗಿವೆ. ರಾಜ್ಯ ಸರ್ಕಾರ ಕೂಡಲೇ ಬರ ನಿರ್ವಹಣಾ ಸಮಿತಿಯನ್ನು ಸಕ್ರಿಯಗೊಳಿಸಿ ಯುದ್ಧೋಪಾದಿಯಲ್ಲಿ ಕ್ರಮ ತೆಗೆದುಕೊಳ್ಳದಿದ್ದರೆ, ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ. ದೆಹಲಿಯಲ್ಲಿ ಕುಳಿತು ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಮೇಲಾಟಕ್ಕಿಂತ ರಾಜ್ಯದ ಜನರ ಹಿತ ಕಾಯುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಥಮ ಆದ್ಯತೆಯಾಗಲಿ ಎಂದು ಸಲಹೆ ನೀಡಿದ್ದಾರೆ.

ಮಳೆಯ ಅನಿಶ್ಚಿತತೆಯ ಲಾಭ ಪಡೆದು ರೈತರನ್ನು ಲೂಟಿ ಮಾಡಲು ಕಾಳಸಂತೆಕೋರರು ಹೊಂಚು ಹಾಕುತ್ತಿದ್ದಾರೆ. ಸರ್ಕಾರ ಕೂಡಲೇ ಪ್ರತಿ ಜಿಲ್ಲೆಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಪಾರದರ್ಶಕವಾಗಿರುವಂತೆ ನೋಡಿಕೊಳ್ಳಬೇಕು. ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು  ಆರ್.ಅಶೋಕ್ ತಿಳಿಸಿದ್ದಾರೆ.

ಬರದಿಂದ ಜಾನುವಾರುಗಳಿಗೆ ಮೇವಿನ ಸಂಕಷ್ಟ ಎದುರಾಗಲಿದೆ. ತಕ್ಷಣವೇ ತಾಲ್ಲೂಕು ಮಟ್ಟದಲ್ಲಿ ಮೇವು ಬ್ಯಾಂಕ್‌ ಗಳನ್ನು ಸಕ್ರಿಯಗೊಳಿಸಿ. ರೈತರು ಅನಿವಾರ್ಯವಾಗಿ ತಮ್ಮ ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ಮಾರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಬಾರದು. ಭತ್ತ, ಜೋಳ ಹಾಗೂ ದ್ವಿದಳ ಧಾನ್ಯಗಳ ಇಳುವರಿ ಕುಂಠಿತಗೊಳ್ಳುವ ಭೀತಿಯಿದೆ. ಇದು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿಯಲಿದೆ. ಸರ್ಕಾರ ಈಗಲೇ ಬೆಳೆ ವಿಮೆ ಹಾಗೂ ಬರ ಪರಿಹಾರದ ಕ್ರಿಯಾ ಯೋಜನೆಯನ್ನು ರೂಪಿಸಿ, ಅನ್ನದಾತರಲ್ಲಿ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಆರ್.ಅಶೋಕ್ ತಿಳಿಸಿದ್ದಾರೆ.

Key words: Karnataka, drought , CM Siddaramaiah, DCM, DK Shivakumar, R. Ashok

The post ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ...

ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ...

ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಏಪ್ರಿಲ್,17,2026 (www.justkannada.in) : ಇತ್ತೀಚೆಗೆ ಚಿಕ್ಕಮಗಳೂರಿನ ಮಾಣಿಕ್ಯಧಾರದ ಬಳಿಕ ಕೇರಳ ಮೂಲದ...

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...