2
July, 2026

A News 365Times Venture

2
Thursday
July, 2026

A News 365Times Venture

ಬಸ್ –ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು

Date:

ಬೆಂಗಳೂರು,ಜೂನ್,13,2025 (www.justkannada.in): ಬೆಳ್ಳಂ‌ ಬೆಳಗ್ಗೆ. ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೇಶವರೆಡ್ಡಿ ( 44 ) ತುಳಸಿ ( 21 ) ಪ್ರಣತಿ ( 4 ) ಮತ್ತು ಒಂದು ವರ್ಷದ ಮಗು ಮೃತಪಟ್ಟವರು. ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ ಆಸ್ವತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಂದು ಮಗು ಸಾವನ್ನಪ್ಪಿದೆ.

ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.  16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆಂಧ್ರ ಸಾರಿಗೆ ಬಸ್ ನ ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.  ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಮತ್ತು ಒಂದು ಬದಿ ಸಂಪೂರ್ಣ ಜಖಂ ಆಗಿದ್ದು, ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.vtu

Key words: Four death, horrific accident, bus, lorry

The post ಬಸ್ –ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,2,2026 (www.justkannada.in):  “ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು...

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,2,2026 (www.justkannada.in): ಅಜ್ಞಾತವಾಗಿದ್ದು, ಎಲ್ಲೆಲ್ಲೋ ಚೆಲ್ಲಾಪಿಲ್ಲಿಯಾಗಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ ಬೆಳಕಿಗೆ...

ಮೈಸೂರು: 24 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಬಿಯರ್ ಹಾಗೂ ವೈನ್ ನಾಶ

ಮೈಸೂರು, ಜುಲೈ,2,2026 (www.justkannada.in): ಅಬಕಾರಿ ಇಲಾಖೆಯು ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ...

ರಾಜ್ಯದಲ್ಲಿ ತೀವ್ರ ಬರ: ಜಲಾಶಯಗಳು ತುಂಬುವವರೆಗೆ ರೈತರು ಬೆಳೆ ಬೆಳೆಯಬೇಡಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,2,2026 (www.justkannda.in):  ರಾಜ್ಯದಲ್ಲಿ ತೀವ್ರ ಬರ ಇದೆ, ನೀರು ವಿದ್ಯುತ್ ಗೆ...