7
March, 2026

A News 365Times Venture

7
Saturday
March, 2026

A News 365Times Venture

ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ – ಸಿಎಂ  ಸಿದ್ದರಾಮಯ್ಯ ಘೋಷಣೆ

Date:

ಬೆಂಗಳೂರು ಜೂನ್,2,2025 (www.justkannada.in):  ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ.  ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ.  ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು. ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ. ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.vtu

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

Key words: Banu Mushtaq, Deepa Basti, Rs 10 lakh,  reward , CM Siddaramaiah, announces

The post ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ – ಸಿಎಂ  ಸಿದ್ದರಾಮಯ್ಯ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...