ಬೆಂಗಳೂರು,ಜನವರಿ,25,2025 (www.justkannada.in): ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ನನ್ನು ಕೂಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಸಹಕಾರ ನಗರದ ಮನೆ ಬಳಿ ನಡೆದ ಗಲಾಟೆ ಸಂಬಂಧ ತೇಜಸ್ ಎಂಬುವವರು ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ಈ ಮಧ್ಯೆ ಪೊಲೀಸರು ಲಾಯರ್ ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ಗಳನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ಗಲಾಟೆ ನಡೆದಿತ್ತು. ಈ ವೇಳೆ ಕಾನೂನು ಬಾಹಿರವಾಗಿ ಫೈರ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಬಳಸಲು ಮಾತ್ರ ಗನ್ ಲೈಸೆನ್ಸ್ ಪಡೆದಿದ್ದರು. ಆದರೆ ಗಲಾಟೆ ವೇಳೆ ಬಳಕೆ ಕಾನೂನು ಬಾಹಿರವಾಗಿ ಫೈರ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
Key words: Bigg Boss, former contestant, lawyer, Jagadish, arrested
The post ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.