ಕೋಲಾರ,ಜೂನ್,16,2025 (www.justkannada.in): ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಒಂದೇ ಒಂದು ಮನೆ ಕೊಟ್ಟಿರುವುದನ್ನು ಸಾಬೀತು ಮಾಡಿದರೇ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಓಪನ್ ಚಾಲೆಂಜ್ ಹಾಕಿದರು.
ಕೋಲಾರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಬಿಜೆಪಿಗರು ಒಂದೇ ಒಂದು ಮನೆ ಕೊಟ್ಟಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವೆ. ಬಿಜೆಪಿಗರು ಮನೆ ಕೊಟ್ಟಿದ್ರೆ ಸಾಬೀತು ಮಾಡಲಿ, 44 ಸಾವಿರ ಮನೆ ರೆಡಿ ಇದೆ. ಕೊಡುವುದು ಮಾತ್ರ ಬಾಕಿ ಇದೆ ಎಂದರು.
ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಕೇವಲ ಪಂಚ ಗ್ಯಾರಂಟಿಗಳ ಭರವಸೆಯನ್ನು ಮಾತ್ರ ನೀಡಿತ್ತು, ಸ್ಲಂ ನಿವಾಸಿಗಳಿಗೆ ಮತ್ತು ರಾಜೀವ್ ಗಾಂಧಿ ಯೋಜನೆ ಅಡಿ ಮನೆಗಳನ್ನು ಕೊಡುತ್ತೇವೆ ಎಂದು ಹೇಳಿರಲಿಲ್ಲ, ಆದರೆ ತಮ್ಮ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿಯಿದೆ, ಹಾಗಾಗೇ ಮನೆಗಳನ್ನು ನೀಡಿದ್ದೇವೆ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಒಂದೇಒಂದು ಮನೆ ಕೊಟ್ಟಿರುವುದನ್ನು ಸಾಬೀತು ಮಾಡಿದರೇ ನಾನು ರಾಜಕೀಯದಿಂದ ನಿವೃತ್ತನಾಗುತ್ತೇನೆ ಎಂದು ಸವಾಲು ಹಾಕಿದರು.
Key words: Minister Zameer Ahmed Khan, open challenge, BJP
The post ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ ಸಚಿವ ಜಮೀರ್ ಅಹ್ಮದ್ ಖಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.